ರಶ್ಮಿಕಾಗೆ ಭದ್ರತೆ ಕೋರಿ ಕೊಡವದಿಂದ ಪತ್ರ ವಿಚಾರ: ಗೃಹ ಸಚಿವರು ಹೇಳಿದ್ದೇನು?

0
Spread the love

ರಶ್ಮಿಕಾಗೆ ಭದ್ರತೆ ಕೋರಿ ಕೊಡವ ಸಮುದಾಯದಿಂದ ಪತ್ರ ಬರೆದ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.

Advertisement

ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು ನಾಚಪ್ಪ ಅವರು, ನಮ್ಮ ಕೊಡಗು ಮೂಲದ ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡುವಂತೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ. ಈ ಕುರಿತು ಗೃಹ ಸಚಿವ ಜಿ.ಪರಮೇಶ್ವರ್ ಮಾತನಾಡಿ, ಈವರೆಗೂ ಯಾವುದೇ ಪತ್ರ ಬಂದಿಲ್ಲ. ಇದರ ಬಗ್ಗೆ ಕಚೇರಿಯಲ್ಲಿ ವಿಚಾರಿಸುತ್ತೇನೆ ಎಂದಿದ್ದಾರೆ.

ಇತ್ತೀಚಿಗೆ ಶಾಸಕ ರವಿ ಗಣಿಗ ಅವರು ರಶ್ಮಿಕಾ ವಿರುದ್ಧ ನೀಡಿದ್ದ ಹೇಳಿಕೆಯ ಬೆನ್ನಲ್ಲೇ ಕೊಡವ ನ್ಯಾಷನಲ್ ಕೌನ್ಸಿಲ್ ನಟಿಯ ಪರ ನಿಂತಿದೆ. ರಶ್ಮಿಕಾ ಮಂದಣ್ಣ ಅವರು ನಮ್ಮ ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗಕ್ಕೆ ಸೇರಿದವರು.

ತಮ್ಮ ಕಠಿಣ ಪರಿಶ್ರಮ ಮತ್ತು ಪ್ರತಿಭೆ ಮೂಲಕ ಅವರಿಂದು ಭಾರತೀಯ ಚಿತ್ರರಂಗದಲ್ಲಿ ಯಶಸ್ಸು ಕಂಡಿದ್ದಾರೆ. ಆದರೆ, ನಟಿಯ ಜನಪ್ರಿಯತೆ ಹಾಗೂ ಕಲಾಪ್ರತಿಭೆಯನ್ನ ತಿಳಿಯದ ಕೆಲವರು ವಿನಾಕಾರಣ ಟೀಕೆ ಮಾಡುವ ಮೂಲಕ ಅವರಿಗೆ ಮಾನಸಿಕ ಕಿರುಕುಳ ನೀಡಿದ್ದಾರೆ. ಇದು ಘೋರ ಮಾತ್ರವಲ್ಲದೆ ಬೆದರಿಕೆಗೆ ಸಮ ಎಂದು ಪತ್ರದಲ್ಲಿ ದೂರಿದ್ದಾರೆ.


Spread the love

LEAVE A REPLY

Please enter your comment!
Please enter your name here