ಇಂದು ನವರಸ ನಟ ಜಗ್ಗೇಶ್ ಅವರ ಹುಟ್ಟುಹಬ್ಬ. ಜಗ್ಗೇಶ್ ಅವರ ಹುಟ್ಟುಹಬ್ಬಕ್ಕೆ ಆತ್ಮೀಯರು, ಕುಟುಂಬಸ್ಥರು, ಸ್ನೇಹಿತರು, ಅಭಿಮಾನಿಗಳು ಸೇರಿದಂತೆ ಸಾವಿರಾರು ಮಂದಿ ಶುಭ ಹಾರೈಸುತ್ತಿದ್ದಾರೆ. ಅಂತೆಯೇ ಜಗ್ಗೇಶ್ ಬರ್ತಡೇಗೆ ಪ್ರಧಾನಿ ನರೇಂದ್ರ ಮೋದಿ ಪತ್ರದ ಮೂಲಕ ಶುಭ ಹಾರೈಸಿದ್ದು ಪ್ರಧಾನಿ ಮೋದಿ ಬರೆದ ಪತ್ರವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿರೋ ಜಗ್ಗೇಶ್ ಅವರು ಸಂಭ್ರಮಿಸಿದ್ದಾರೆ.
ಸ್ನೇಹಿತರೆ ಇಂದು ನನ್ನ ತಂದೆತಾಯಿ ದೇಣಿಗೆ ನೀಡಿದ ಈ ದೇಹಕ್ಕೆ 62ನೆ ಜನ್ಮದಿನ
ನನಗೆ ಮತ್ತೊಂದು ಸಂತೋಷ ವಿಶ್ವ ನಾಯಕರು ನರೇಂದ್ರ ಮೋದಿ ಅವರು ಪ್ರೀತಿಯಿಂದ ಹರಸಿ ಕಳಿಸಿದ ಅಕ್ಕರೆಯ ಹಾರೈಕೆ ಪತ್ರ
‘ಕಾಲ ನಿಲ್ಲದೆ ಓಡುತ್ತದೆ ನಾವು ಅದರೊಟ್ಟಿಗೆ ಸುಮ್ಮನೆ ಓಡದೆ ಹೋದಮೇಲು ನೆನಪಿಡುವ ಸಾಧನೆಯ ಓಟ ಆಗಿರಬೇಕು” ನನ್ನ ಸಲಹುತ್ತಿರುವ ಪ್ರೀತಿಪಾತ್ರರು ಸರ್ವರಿಗು ಧನ್ಯವಾದ ಎಂದು ಬರೆದುಕೊಂಡಿದ್ದಾರೆ.
ಮಾರ್ಚ್ 17 ರಂದು ಬರುವ ನಿಮ್ಮ ಹುಟ್ಟುಹಬ್ಬಕ್ಕೆ ಶುಭಾಶಯಗಳು. ಹಿಂದಿನ ಸಾಧನೆಗಳಿಂದ ಸ್ಫೂರ್ತಿ ಪಡೆದು, ಬೇರೆಯವರ ಬದುಕಿನಲ್ಲಿ ಬದಲಾವಣೆ ತರಲು ಈ ಹುಟ್ಟುಹಬ್ಬದ ಸಂದರ್ಭವನ್ನು ಬಳಸಿಕೊಳ್ಳಿ. ನಿಮ್ಮ ಶ್ರಮ ಮತ್ತು ಬದ್ಧತೆ ದೇಶದ ಪ್ರಗತಿಗೆ ತುಂಬಾ ಮುಖ್ಯ.
ಈ ಅಮೃತ ಕಾಲದಲ್ಲಿ ನಾವು ಬೆಳವಣಿಗೆಯತ್ತ ಸಾಗುತ್ತಿದ್ದೇವೆ. ಎಲ್ಲರನ್ನೂ ಒಳಗೊಂಡ, ಸಮೃದ್ಧ ಭಾರತ ನಿರ್ಮಾಣ ಮಾಡಲು ನಾವು ಕೆಲಸ ಮಾಡುತ್ತಿದ್ದೇವೆ.
ನಿಮ್ಮ ನಿರಂತರ ಪ್ರಯತ್ನಗಳು ದೇಶವನ್ನು ಇನ್ನಷ್ಟು ಮುಂದೆ ಕೊಂಡೊಯ್ಯುತ್ತವೆ ಎಂಬ ನಂಬಿಕೆ ನನಗಿದೆ. ಮುಂದಿನ ವರ್ಷವು ನಿಮಗೆ ಸಂತೋಷ, ಶಾಂತಿ ಮತ್ತು ಆರೋಗ್ಯ ತರಲಿ. ಶುಭಾಶಯಗಳೊಂದಿಗೆ, ನಿಮ್ಮ, (ನರೇಂದ್ರ ಮೋದಿ) ಎಂದು ಬರೆದಿದ್ದಾರೆ.