RSS ಚುಟುವಟಿಕೆ ನಿರ್ಬಂಧಕ್ಕೆ ಪತ್ರ: ನನಗೆ ಬೆದರಿಕೆ ಕರೆಗಳು ಬರುತ್ತಲೇ ಇವೆ – ಪ್ರಿಯಾಂಕ್ ಖರ್ಗೆ

0
Spread the love

ಬೆಂಗಳೂರು:  ಸರ್ಕಾರಿ ಸಂಸ್ಥೆಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳನ್ನು ನಿರ್ಬಂಧಿಸಲು ಪತ್ರ ಬರೆದ ಬೆನ್ನಲ್ಲೆ ಅವರಿಗೆ ಬೆದರಿಕೆ ಕರೆಗಳು ಬಂದಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. ಈ ಸಂಬಂಧ ಫೇಸ್​​​​ ಬುಕ್​​​ನಲ್ಲಿ ಪೋಸ್ಟ್ ಮಾಡಿರುವ ಅವರು,  ಸರ್ಕಾರಿ ಶಾಲೆಗಳು, ಕಾಲೇಜುಗಳು ಮತ್ತು ಸಾರ್ವಜನಿಕ ಸಂಸ್ಥೆಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ತಡೆಯಬೇಕು ಎಂದು ನಾನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದ್ದಿದೆ,

Advertisement

ಇದನ್ನು ತಡೆಯಲು ಮುಂದಾಗಿರುವ ನನ್ನ ಮೇಲೆ ನಿರಂತರ ನಿಂದನೆ ಹಾಗೂ ಬೆದರಿಕೆ ಕರೆಗಳು ಬರುತ್ತಿದೆ. ಇದರಿಂದ ನನಗೆ ಏನು ಆಗುವುದಿಲ್ಲ ಅಥವಾ ನಾನು ವಿಚಲಿತನಾಗುವುದಿಲ್ಲ, ಮಹಾತ್ಮ ಗಾಂಧಿ ಅಥವಾ ಬಾಬಾಸಾಹೇಬ್ ಅಂಬೇಡ್ಕರ್ ಅವರಂತಹ ಮಹಾನ್ ನಾಯಕರನ್ನೇ ಆರ್‌ಎಸ್‌ಎಸ್‌ ಬಿಟ್ಟಿಲ್ಲ, ಇನ್ನು ಅವರು ನನ್ನನ್ನು ಹೇಗೆ ಬಿಡುತ್ತಾರೆ? ಎಂದು ಸೋಶಿಯಲ್​ ಮೀಡಿಯಾದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೊಂಡಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ ಪೋಸ್ಟ್​​ನಲ್ಲಿ ಏನಿದೆ?

“ಕಳೆದ ಎರಡು ದಿನಗಳಿಂದ ನನ್ನ ಫೋನ್ ರಿಂಗಣಿಸುವುದನ್ನು ನಿಲ್ಲಿಸಿಲ್ಲ. ಸರ್ಕಾರಿ ಶಾಲೆಗಳು, ಕಾಲೇಜುಗಳು ಮತ್ತು ಸಾರ್ವಜನಿಕ ಸಂಸ್ಥೆಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ಪ್ರಶ್ನಿಸುವ ಹಾಗೂ ತಡೆಯುವ ಧೈರ್ಯ ಮಾಡಿದ್ದರಿಂದ ನನ್ನ ಮತ್ತು ನನ್ನ ಕುಟುಂಬದ ವಿರುದ್ಧ ಬೆದರಿಕೆಗಳು, ಅತ್ಯಂತ ಕೀಳು ಪದಗಳ ನಿಂದನೆಗಳಿಂದ ತುಂಬಿದ ಕರೆಗಳು ಬರುತ್ತಲೇ ಇವೆ.

ಆದರೆ ನಾನು ಇದರಿಂದ ವಿಚಲಿತನಾಗುವುದಿಲ್ಲ ಅಥವಾ ನನಗೆ ಅಚ್ಚರಿಯೂ ಆಗಿಲ್ಲ. ಮಹಾತ್ಮ ಗಾಂಧಿ ಅಥವಾ ಬಾಬಾಸಾಹೇಬ್ ಅಂಬೇಡ್ಕರ್ ಅವರಂತಹ ಮಹಾನ್ ನಾಯಕರನ್ನೇ ಆರ್‌ಎಸ್‌ಎಸ್‌ ಬಿಟ್ಟಿಲ್ಲ, ಇನ್ನು ಅವರು ನನ್ನನ್ನು ಹೇಗೆ ಬಿಡುತ್ತಾರೆ? ಬೆದರಿಕೆಗಳು ಮತ್ತು ವೈಯಕ್ತಿಕ ನಿಂದನೆಗಳಿಂದ ನನ್ನ ಬಾಯಿ ಮುಚ್ಚಿಸಬಹುದು ಎಂದು ಅವರು ಭಾವಿಸಿದ್ದರೆ,

ಅದು ಅವರ ಕಲ್ಪನೆ ಮಾತ್ರ. ಇದಿನ್ನೂ ಆರಂಭವಷ್ಟೇ. ಇದು ಬುದ್ಧ, ಬಸವಣ್ಣ ಮತ್ತು ಬಾಬಾಸಾಹೇಬ್ ಅವರ ತತ್ವಗಳ ಮೇಲೆ ಸಮಾಜವನ್ನು ನಿರ್ಮಿಸುವ ಕಾಲ. ಸಮಾನತೆ, ವಿವೇಚನೆ ಮತ್ತು ಕರುಣೆಯಲ್ಲಿ ಬೇರೂರಿರುವ ಸಮಾಜ ಹಾಗೂ ಈ ರಾಷ್ಟ್ರವನ್ನು ಅತ್ಯಂತ ಅಪಾಯಕಾರಿ “viRuSS”  ಗಳಿಂದ ಶುದ್ಧೀಕರಿಸುವ ಸಮಯ ಇದಾಗಿದೆ” ಎಂದು ಸಚಿವ ಪ್ರಿಯಾಂಕ್ ಖರ್ಗೆ ಫೇಸ್​​​​ ಬುಕ್​​​ನಲ್ಲಿ ಬರೆದುಕೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here