ಬೆಂಗಳೂರು:- ಕೆಆರ್ ನಗರದಲ್ಲಿ ಮನೆಕೆಲಸದಾಕೆಯ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಈ ತೀರ್ಪಿನ ಬಗ್ಗೆ ಮಾತನಾಡಿದ ಮೋಹಕತಾರೆ ರಮ್ಯಾ, ಕಾನೂನು ಎಲ್ಲರಿಗೂ ಒಂದೇ. ಮಹಿಳೆಯರ ಮೇಲಿನ ಅಪರಾಧಗಳಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ರಮ್ಯಾ ಅವರು ಬರೆದು ಪೋಸ್ಟ್ ಮಾಡಿದ್ದಾರೆ. ಈ ಹಿಂದೆಯೂ ತಪ್ಪಿಸ್ಥರಿಗೆ ಶಿಕ್ಷೆಯಾಗಬೇಕು ಎಂದು ರಮ್ಯಾ ಅವರು ಹೇಳಿದ್ದರು.
ಇನ್ನೂ ಕೆ.ಆರ್ ನಗರದ ಮನೆಗೆಲಸದ ಮಹಿಳೆ ಮೇಲೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಅತ್ಯಾ*ಚಾರ ಎಸಗಿದ್ದರು. ಈ ಸಂಬಂಧ ಫೋಟೋ, ವಿಡಿಯೋ ಕೂಡ ಇಟ್ಟುಕೊಂಡಿದ್ದರು. ಸಾಕಷ್ಟು ವಿಡಿಯೋಗಳು ಕೂಡ ಪೆನ್ಡ್ರೈವ್ನಲ್ಲಿದ್ದವು. ಜಿಲ್ಲೆಯಲ್ಲಿ ಹಂಚಿಕೆ ಮಾಡಲಾಗಿತ್ತು. ಹೀಗಾಗಿ ರಾಜ್ಯ ಸರ್ಕಾರ ಈ ಪ್ರಕರಣವನ್ನು ಎಸ್ಐಟಿಗೆ ಒಪ್ಪಿಸಿತ್ತು. ತನಿಖೆ ನಡೆಸಿದ್ದ ಎಸ್ಐಟಿ ವರದಿ ಹಾಗೂ ಸಾಕ್ಷಿ ಸಮೇತ ಕೋರ್ಟ್ಗೆ ಸಲ್ಲಿಕೆ ಮಾಡಿತ್ತು. ಎರಡು ಕಡೆಯ ವಾದ, ಪ್ರತಿವಾದ ಆಲಿಸಿ ಪ್ರಜ್ವಲ್ ರೇವಣ್ಣಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.