ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಚಾರ: ಈ ಬಗ್ಗೆ ಮೈತ್ರಿ ನಾಯಕರ ಪ್ರತಿಕ್ರಿಯೆ ಬಹುಮುಖ್ಯ – DCM ಡಿಕೆಶಿ!

0
Spread the love

ನವದೆಹಲಿ:- ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ DCM ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

Advertisement

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆಯಾಗಿರುವ ಬಗ್ಗೆ ನಾವು ಮಾತನಾಡಿದರೆ ರಾಜಕೀಯವಾಗುತ್ತದೆ. ಹೀಗಾಗಿ ಜೆಡಿಎಸ್-ಬಿಜೆಪಿ ನಾಯಕರು ಪ್ರತಿಕ್ರಿಯೆ ನೀಡುವುದು ಬಹುಮುಖ್ಯ.

ಈ ತೀರ್ಪಿನ ಬಗ್ಗೆ ನನ್ನ ಪ್ರತಿಕ್ರಿಯೆ ಕೇಳುವುದಕ್ಕಿಂತ ಅವರದ್ದೇ ಪಕ್ಷ ಜೆಡಿಎಸ್ ಹಾಗೂ ಅವರ ಮೈತ್ರಿ ಪಕ್ಷ ಬಿಜೆಪಿ ನಾಯಕರನ್ನು ಕೇಳಬೇಕು. ಏನು ಸರಿ, ಏನು ಸರಿಯಿಲ್ಲ ಎಂದು ಅವರು ಹೇಳಬೇಕು. ಅವರಿಗೆ ಈ ಬಗ್ಗೆ ಪ್ರತಿಕ್ರಿಯೆ ನೀಡುವ ಶಕ್ತಿ, ಸಾಮರ್ಥ್ಯ ಇದೆ. ಜೆಡಿಎಸ್ ರಾಜ್ಯಾಧ್ಯಕ್ಷರು, ರಾಷ್ಟ್ರೀಯ ಅಧ್ಯಕ್ಷರು, ಯುವ ಘಟಕದ ಅಧ್ಯಕ್ಷರು ಪ್ರತಿಕ್ರಿಯೆ ನೀಡಲಿ. ನಾವು ಕಾನೂನಿಗೆ ಗೌರವ ಕೊಟ್ಟು, ಅದು ಹೇಳಿದಂತೆ ಕೇಳಿಕೊಂಡು ಬರುತ್ತೇವೆ. ಅಶೋಕ್, ನಾರಾಯಣಸ್ವಾಮಿ, ಸಿಟಿ ರವಿ ಸೇರಿದಂತೆ ಬಿಜೆಪಿ ಪ್ರಮುಖ ನಾಯಕರು ಯಾಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು.

ವಿಚಾರಣೆ ವೇಳೆಯಲ್ಲೂ ಪ್ರಜ್ವಲ್ ರೇವಣ್ಣ ಇದನ್ನು ಷಡ್ಯಂತ್ರ ಎಂದು ವಾದ ಮಂಡಿಸಿದ್ದಾರೆ ಎಂಬ ಕುರಿತು ಪ್ರತಿಕ್ರಿಯಿಸಿ, ನನಗೆ ಆ ಬಗ್ಗೆ ಗೊತ್ತಿಲ್ಲ. ಅವರು ನ್ಯಾಯಾಲಯದಲ್ಲಿ ಕೊಟ್ಟಿರುವ ಹೇಳಿಕೆ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ತಿಳಿಸಿದರು.


Spread the love

LEAVE A REPLY

Please enter your comment!
Please enter your name here