HomeChikkamagaluruಗುರು ದರ್ಶನದಿಂದ ಜೀವನ ಪಾವನ: ಯದುವೀರ ಕೃಷ್ಣದತ್ತ ಚಾಮರಾಜೇಂದ್ರ ಒಡೆಯರ್

ಗುರು ದರ್ಶನದಿಂದ ಜೀವನ ಪಾವನ: ಯದುವೀರ ಕೃಷ್ಣದತ್ತ ಚಾಮರಾಜೇಂದ್ರ ಒಡೆಯರ್

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಬಾಳೆಹೊನ್ನೂರು: ಬಹು ಜನ್ಮಗಳ ಪುಣ್ಯ ಫಲದಿಂದ ಮಾನವ ಜೀವನ ದೊರೆತಿದೆ. ಗುರುವಿನ ಕಾರುಣ್ಯ ಎಲ್ಲರಿಗೂ ಬೇಕು. ಗುರು ಪೀಠಗಳ ದರ್ಶನದಿಂದ ಜೀವನ ಪಾವನಗೊಳ್ಳುವುದೆಂದು ಮೈಸೂರು ರಾಜ ಮನೆತನದ ಯದುವೀರ ಕೃಷ್ಣದತ್ತ ಚಾಮರಾಜೇಂದ್ರ ಒಡೆಯರ್ ಅಭಿಪ್ರಾಯ ಪಟ್ಟರು.

ಅವರು ಗುರುವಾರ ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ ಜರುಗಿದ ಲಿಂ. ಶ್ರೀಮದ್ ರಂಭಾಪುರಿ ಶಿವಾನಂದ ಜಗದ್ಗುರುಗಳ ಪೀಠಾರೋಹಣ ಶತಮಾನೋತ್ಸವ ಸಮಾರಂಭವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡುತ್ತಿದ್ದರು.

ಮನುಷ್ಯ ಜೀವನದಲ್ಲಿ ಸಾಧಿಸಿದ್ದು ಅಲ್ಪ. ಸಾಧಿಸಬೇಕಾದದ್ದು ಬಹಳಷ್ಟಿದೆ. ದೇವರು, ಧರ್ಮ ಮತ್ತು ಗುರುವಿನಲ್ಲಿ ನಂಬಿಕೆ ಇರಬೇಕಾಗುತ್ತದೆ. ಶ್ರೀ ರಂಭಾಪುರಿ ಪೀಠಕ್ಕೂ ಮತ್ತು ಮೈಸೂರು ರಾಜ ಮನೆತನಕ್ಕೂ ಪೂರ್ವದಿಂದಲೂ ನಿಕಟ ಸಂಬಂಧ ಇರುವ ಇತಿಹಾಸವನ್ನು ಕಾಣುತ್ತೇವೆ. ಚಾಮರಾಜ ಒಡೆಯರ್, ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಜಯಚಾಮರಾಜ ಒಡೆಯರ್ ಈ ಕ್ಷೇತ್ರಕ್ಕೆ ಆಗಮಿಸಿ ಆಶೀರ್ವಾದ ಪಡೆದ ಸಂಗತಿ ತಿಳಿದು ನಮಗೆ ಬಹಳ ಹರುಷವಾಗಿದೆ. ಲಿಂ. ಶ್ರೀ ರಂಭಾಪುರಿ ಶಿವಾನಂದ ಜಗದ್ಗುರುಗಳು ಶ್ರೀ ರಂಭಾಪುರಿ ಪೀಠದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದವರು. ಅಂಥ ಪರಮ ಪೂಜ್ಯರು ಮೈಸೂರು ಸಂಸ್ಥಾನಕ್ಕೆ ದಯಮಾಡಿಸಿ ಆಶೀರ್ವದಿಸಿದ ಆ ಘಳಿಗೆ ಅಮೂಲ್ಯವಾದುದು ಎಂದರು.

ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯರು, ಮುಕ್ತಿಮಂದಿರ ಕ್ಷೇತ್ರದ ವಿಮಲ ರೇಣುಕ ಮುಕ್ತಿಮುನಿ ಶಿವಾಚಾರ್ಯರು, ಸುಳ್ಳ ಶಿವಸಿದ್ಧರಾಮೇಶ್ವರ ಶಿವಾಚಾರ್ಯರು, ಬಂಕಾಪುರ ರೇವಣಸಿದ್ಧ ಶಿವಾಚಾರ್ಯರು, ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯರನ್ನು ಮೊದಲ್ಗೊಂಡು ಸುಮಾರು 50ಕ್ಕೂ ಹೆಚ್ಚು ಮಠಾಧೀಶರು ವೇದಿಕೆ ಮೇಲೆ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಜಮಖಂಡಿ ಶಾಸಕ ಜಗದೀಶ ಗುಡಗುಂಟಿ ವೀರಶೈವ ಧರ್ಮದ ಕೀರ್ತಿ ಕಳಸ ಕೃತಿ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಶ್ರೀ ರಂಭಾಪುರಿ ಶಿವಾನಂದ ಜಗದ್ಗುರುಗಳ ಜೀವನ ದರ್ಶನ ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡಿದರು.
ಶಾಸಕ ಟಿ.ಡಿ. ರಾಜೇಗೌಡ, ಮಾಜಿ ಸಚಿವ ಡಿ.ಎನ್. ಜೀವರಾಜ್, ಅ.ಭಾ.ವೀ.ಲಿಂ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಹೆಚ್.ಎಂ. ಲೋಕೇಶ್, ಶ್ರೀ ಜಗದ್ಗುರು ರೇಣುಕಾಚಾರ್ಯ ವಿದ್ಯಾಸಂಸ್ಥೆ ಅಧ್ಯಕ್ಷ ಯು.ಎಂ. ಬಸವರಾಜ ಮತ್ತು ಆಡಳಿತ ಮಂಡಳಿಯ ಸದಸ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಗಿಣಿವಾರದ ಕೊಡಚಾದ್ರಿ ವಿದ್ಯಾ ಸಂಸ್ಥೆಯ ಮಕ್ಕಳು ಭರತನಾಟ್ಯ ಪ್ರದರ್ಶನ ನೀಡಿದರು.

ಕೇಂದ್ರದ ರೈಲ್ವೆ ಮತ್ತು ಜಲಶಕ್ತಿ ಖಾತೆಯ ಸಚಿವ ವಿ.ಸೋಮಣ್ಣ ಮಾತನಾಡಿ ವೀರಶೈವ ಧರ್ಮದ ಇತಿಹಾಸದಲ್ಲಿ ಅವಿಸ್ಮರಣೀಯವಾದ ದಿನ ಇಂದು. ಭೂಲೋಕದ ಸ್ವರ್ಗದಂತಿರುವ ಶ್ರೀ ರಂಭಾಪುರಿ ಪೀಠದ ಪರಿಸರದಲ್ಲಿ ಲಿಂ. ಶ್ರೀ ರಂಭಾಪುರಿ ಶಿವಾನಂದ ಜಗದ್ಗುರುಗಳ ಪೀಠಾರೋಹಣದ ಶತಮಾನೋತ್ಸವ ಸಮಾರಂಭದಲ್ಲಿ ಪಾಲ್ಗೊಂಡಿರುವುದು ನನಗೆ ಬಹಳಷ್ಟು ಸಂತಸ ತಂದಿದೆ. ಲಿಂ. ಶ್ರೀ ಶಿವಾನಂದ ಜಗದ್ಗುರುಗಳು ವೀರಶೈವ ಧರ್ಮ ಸಂಸ್ಕೃತಿಯ ಸಂವರ್ಧನೆಗೆ ಬಹಳಷ್ಟು ಶ್ರಮಿಸಿರುವುದನ್ನು ಕಾಣುತ್ತೇವೆ. ಇತ್ತೀಚೆಗೆ ದಾವಣಗೆರೆಯಲ್ಲಿ ಜರುಗಿದ ವೀರಶೈವ ಪೀಠಾಚಾರ್ಯರ ಹಾಗೂ ಶಿವಾಚಾರ್ಯರ ಶೃಂಗ ಸಮ್ಮೇಳನದಲ್ಲಿ ಕೈಗೊಂಡ ನಿರ್ಣಯಗಳು ಅತ್ಯಂತ ಮಹತ್ವದ್ದಾಗಿವೆ. ಚಿಕ್ಕಮಗಳೂರು–ಬಾಳೆಹೊನ್ನೂರು–ಶೃಂಗೇರಿ ರಸ್ತೆ ಮಾರ್ಗವನ್ನು ಶೀಘ್ರದಲ್ಲಿಯೇ ರಾಷ್ಟ್ರೀಯ ಹೆದ್ದಾರಿಯನ್ನಾಗಿ ಪರಿವರ್ತಿಸಲಾಗುವುದು ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!