ವಿಜಯಸಾಕ್ಷಿ ಸುದ್ದಿ, ಗದಗ: ನವರಾತ್ರಿ ಆಚರಣೆಯು ಶರನ್ನವರಾತ್ರಿ, ದುರ್ಗಾ ಪೂಜೆ, ಮತ್ತು ವಿಜಯದಶಮಿಯನ್ನು ಒಳಗೊಂಡಿದ್ದು, ಒಂಬತ್ತು ರಾತ್ರಿಗಳು, ಒಂಬತ್ತು ದೇವಿಯರ ಪೂಜೆಯನ್ನು ಮಾಡಲಾಗುತ್ತದೆ. ಇದನ್ನು ಕೆಟ್ಟದ್ದರ ಮೇಲೆ ಒಳ್ಳೆಯದರ ವಿಜಯವನ್ನು ಸಂಕೇತಿಸಲು ಆಚರಿಸಲಾಗುತ್ತದೆ. ಭಾರತೀಯ ಸಂಸ್ಕೃತಿ, ಪರಂಪರೆಯನ್ನು ರೂಢಿಸಿಕೊಂಡು ಬಂದಿರುವ ನಾವು, ಶ್ರದ್ಧಾ ಭಕ್ತಿಯಿಂದ ದಸರಾ ಹಬ್ಬವನ್ನು ಆಚರಿಸುವ ಜೊತೆಗೆ ಶಕ್ತಿದೇವಿಯ ಆರಾಧನೆ ಮಾಡಿ ನಮ್ಮ ಜೀವನವನ್ನು ಪಾವನ ಮಾಡಿಕೊಳ್ಳಬೇಕು ಎಂದು ಬಳಗಾನೂರ ಚಿಕೇನಕೊಪ್ಪ ಚನ್ನವೀರ ಶರಣರ ಮಠದ ಶ್ರೀಶಿವಶಾಂತವೀರ ಶರಣರು ಹೇಳಿದರು.
ನಗರದ ಮುಳಗುಂದನಾಕಾ ಬಳಿಯ ಶ್ರೀಅಡವೀಂದ್ರಸ್ವಾಮಿ ಮಠದಲ್ಲಿ ದಸರಾ ಮಹೋತ್ಸವ ಮತ್ತು ಶ್ರೀದೇವಿ ಪುರಾಣ ಪ್ರವಚನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ಸಮ್ಮುಖ ವಹಿಸಿದ್ದ ಶ್ರೀಮಠದ ಧರ್ಮದರ್ಶಿಗಳಾದ ಮಹೇಶ್ವರ ಸ್ವಾಮೀಜಿ ನವರಾತ್ರಿ ಆಚರಣೆಯ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಗಣ್ಯ ಉದ್ಯಮಿಗಳಾದ ಬಸವರಾಜ ಬಂಗಾರಶಟ್ಟರ, ಸುಜಾತಾ ಬಂಗಾರಶಟ್ಟರ, ಬಾಬಾಸಾ ಭಾಂಡಗೆ, ಅಶ್ವಿನಿಬಾಯಿ ಭಾಂಡಗೆ, ಅಂಬಾಸಾ ಖಟವಟೆ, ಗಾಯತ್ರಿ ಖಟವಟೆ, ಶ್ರೀಅನ್ನಪೂರ್ಣೇಶ್ವರಿದೇವಿ ಜಾತ್ರಾ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷ ಎಸ್.ಪಿ. ಸಂಶಿಮಠ, ಅಧ್ಯಕ್ಷರಾದ ಸದಾಶಿವಯ್ಯ ಮದರಿಮಠ, ಪ್ರಧಾನ ಕಾರ್ಯದರ್ಶಿ ಶರಣಬಸಪ್ಪ ಗುಡಿಮನಿ, ಮಹಿಳಾ ಸಮಿತಿ ಅಧ್ಯಕ್ಷರಾದ ಸುವರ್ಣಾ ಮದರಿಮಠ ಮುಂತಾದ ಗಣ್ಯರು ವೇದಿಕೆಯಲ್ಲಿದ್ದರು.
ಶ್ರೀಅನ್ನಪೂರ್ಣೇಶ್ವರ ಸನ್ನಿಧಿಯಲ್ಲಿ ಡಾ. ರಾಜಗುರು ಗುರುಸ್ವಾಮಿ ಕಲಕೇರಿ ಅವರಿಂದ ಪುರಾಣ ಪ್ರವಚನ ನಡೆಯಿತು. ಚನ್ನಬಸಯ್ಯ ಶಾಸ್ತ್ರಿಗಳು ಹೇಮಗಿರಿಮಠ ಪುರಾಣ ಪಠಿಸಿದರು. ಪಕ್ರುಸಾಬ ಮುಲ್ಲಾ, ಜಗನ್ನಾಥ ಕಲಬುರಗಿ, ಶರಣಕುಮಾರ ಗುತ್ತರಗಿ, ಎಸ್.ಬಿ. ಭಜಂತ್ರಿ ಸಂಗೀತ ಸೇವೆ ನೀಡಿದರು.
ಪೂಜಾ ಸಮಿತಿ ಅಧ್ಯಕ್ಷ ಶರಣಯ್ಯಸ್ವಾಮಿ ಶಿವಪ್ಪಯ್ಯನಮಠ, ವೀರೇಶ್ವರ ಸ್ವಾಮಿಗಳು ಹೊಸಳ್ಳಿಮಠ, ಜಾತ್ರಾ ಮಹೋತ್ಸವ ಸಮಿತಿ ಕಾರ್ಯದರ್ಶಿ ಗೀತಾ ಎಂ. ಹೂಗಾರ, ಸಹಕಾರ್ಯದರ್ಶಿ ಸುಷ್ಮಾ ಖಂಡಪ್ಪಗೌಡ್ರ, ಕೋಶಾಧ್ಯಕ್ಷರಾದ ಅಶ್ವಿನಿ ನೀಲಗುಂದ, ವಿ.ಎಚ್. ದೇಸಾಯಿಗೌಡ್ರ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಶ್ರೀಅನ್ನಪೂರ್ಣೇಶ್ವರಿದೇವಿ ಜಾತ್ರಾ ಮಹೋತ್ಸವ ಸಮಿತಿಯ ಕೋಶಾಧ್ಯಕ್ಷ ವಿರುಪಣ್ಣ ಬಳ್ಳೊಳ್ಳಿ ಸ್ವಾಗತಿಸಿದರು. ವಿ.ಎಂ. ಕುಂದ್ರಾಳಹಿರೇಮಠ ಕಾರ್ಯಕ್ರಮ ನಿರೂಪಿಸಿದರು. ಜಾತ್ರಾ ಮಹೋತ್ಸವ ಮಹಿಳಾ ಸಮಿತಿ ಕೋಶಾಧ್ಯಕ್ಷರಾದ ಅಶ್ವಿನಿ ಎಸ್. ನೀಲಗುಂದ ವಂದಿಸಿದರು.
ಒಂಬತ್ತು ದಿನಗಳ ನವರಾತ್ರಿ ನಂತರ, ದಶಮಿಯಂದು ರಾವಣನ ಪ್ರತಿಕೃತಿಗಳನ್ನು ಸುಡುವ ಮೂಲಕ ಕೆಟ್ಟದ್ದರ ಮೇಲೆ ಒಳ್ಳೆಯದರ ವಿಜಯವನ್ನು ಸಂಭ್ರಮಿಸಲಾಗುತ್ತದೆ. ರೈತರು ಮತ್ತು ವ್ಯಾಪಾರಿಗಳು ತಮ್ಮ ಆಯುಧಗಳನ್ನು ಪೂಜಿಸುವ ಆಯುಧ ಪೂಜೆಯನ್ನು ಆಚರಿಸುತ್ತಾರೆ. ದುರ್ಗಾದೇವಿ ಮಹಿಷಾಸುರ ರಾಕ್ಷಸನನ್ನು ಸಂಹರಿಸಿ, ಲೋಕಕ್ಕೆ ಒಳಿತನ್ನು ತಂದ ಕಥೆಯನ್ನು ನವರಾತ್ರಿ ತಿಳಿಸುತ್ತದೆ. ವಿಜಯದಶಮಿಯ ದಿನದಂದು ಶ್ರೀರಾಮನು ರಾವಣನ ಮೇಲೆ ವಿಜಯ ಸಾಧಿಸಿದ. ಈ ಹಬ್ಬವು ಕೆಟ್ಟತನದ ಮೇಲೆ ಒಳಿತಿನ ವಿಜಯವನ್ನು ಸಂಕೇತಿಸುತ್ತದೆ ಎಂದು ಶಿವಶಾಂತವೀರ ಶರಣರು ಹೇಳಿದರು.