ವಿಜಯಸಾಕ್ಷಿ ಸುದ್ದಿ, ಗದಗ: ನವರಾತ್ರಿಯ ಸಂದರ್ಭದಲ್ಲಿ ಶ್ರೀದೇವಿಯ ಆರಾಧನೆಯಿಂದ ಮನುಷ್ಯ ಜನ್ಮದಲ್ಲಿ ನೆಮ್ಮದಿ ಹಾಗೂ ಸಂತೃಪ್ತ ಜೀವನ ಹೊಂದಲು ಸಾಧ್ಯ ಎಂದು ಗದಗ ರೇಣುಕಾಚಾರ್ಯ ಮಂದಿರದ ಚಂದ್ರಶೇಖರ ದೇವರು ಹೇಳಿದರು.
ನಗರದ ಮುಳಗುಂದ ನಾಕಾ ಬಳಿಯ ಶ್ರೀ ಅಡವೀಂದ್ರಸ್ವಾಮಿ ಮಠದಲ್ಲಿ ದಸರಾ ಮಹೋತ್ಸವ, ಕುಮಾರಿಕಾ ಪೂಜೆ ಹಾಗೂ ಶ್ರೀದೇವಿ ಪುರಾಣ ಮಂಗಲೋತ್ಸವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ಸಮ್ಮುಖ ವಹಿಸಿದ್ದ ಶ್ರೀಮಠದ ಧರ್ಮದರ್ಶಿಗಳಾದ ಮಹೇಶ್ವರ ಸ್ವಾಮೀಜಿ ಆಯುಧ ಪೂಜೆ, ಕುಮಾರಿಕಾ ಪೂಜೆ, ಶ್ರೀದೇವಿಯ ಆರಾಧನೆ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಚನ್ನಯ್ಯ ತೋಟಯ್ಯ ಹಿರೇಮಠ, ಶೈಲಾ ಶಂಕರಲಿಂಗಪ್ಪ ಕೊಡೇಕಲ್, ನಗರಸಭೆ ಸದಸ್ಯರಾದ ರಾಘವೇಂದ್ರ ಬಸವರಾಜ ಯಳವತ್ತಿ, ಅನುಷಾ ರಾಘವೇಂದ್ರ ಯಳವತ್ತಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರಲ್ಲದೇ, ಶ್ರೀಗಳಿಂದ ಗುರುರಕ್ಷೆ ಪಡೆದರು.
ಶ್ರೀ ಅನ್ನಪೂರ್ಣೇಶ್ವರಿ ದೇವಿ ಜಾತ್ರಾ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷ ಎಸ್.ಪಿ. ಸಂಶಿಮಠ, ಅಧ್ಯಕ್ಷ ಸದಾಶಿವಯ್ಯ ಮದರಿಮಠ, ಪ್ರಧಾನ ಕಾರ್ಯದರ್ಶಿ ಶರಣಬಸಪ್ಪ ಗುಡಿಮನಿ, ಮಹಿಳಾ ಸಮಿತಿ ಅಧ್ಯಕ್ಷರಾದ ಸುವರ್ಣಾ ಮದರಿಮಠ ಮುಂತಾದವರು ವೇದಿಕೆಯಲ್ಲಿದ್ದರು.
ಶ್ರೀ ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ಡಾ. ರಾಜಗುರು ಗುರುಸ್ವಾಮಿ ಕಲಕೇರಿ ಅವರಿಂದ ನವರಾತ್ರಿಯ ಅಂಗವಾಗಿ ನಡೆದುಬಂದ 45ನೇ ವರ್ಷದ ಶ್ರೀದೇವಿ ಪುರಾಣ ಪ್ರವಚನ ಮಂಗಲೋತ್ಸವ ಜರುಗಿತು. ಚನ್ನಬಸಯ್ಯ ಶಾಸ್ತ್ರಿಗಳು ಹೇಮಗಿರಿಮಠ ಪುರಾಣ ಪಠಿಸಿದರು. ಸುಕ್ರುಸಾಬ ಮುಲ್ಲಾ, ಜಗನ್ನಾಥ ಕಲಬುರಗಿ, ಶರಣಕುಮಾರ ಗುತ್ತರಗಿ, ಎಸ್.ಬಿ. ಭಜಂತ್ರಿ ಸಂಗೀತ ಸೇವೆ ನೀಡಿದರು.
ಪೂಜಾ ಸಮಿತಿ ಅಧ್ಯಕ್ಷ ಶರಣಯ್ಯಸ್ವಾಮಿ ಶಿವಪ್ಪಯ್ಯನಮಠ, ವೀರೇಶ್ವರ ಸ್ವಾಮಿಗಳು ಹೊಸಳ್ಳಿಮಠ, ಜಾತ್ರಾ ಮಹೋತ್ಸವ ಸಮಿತಿ ಕಾರ್ಯದರ್ಶಿ ಗೀತಾ ಎಂ. ಹೂಗಾರ, ಸಹಕಾರ್ಯದರ್ಶಿ ಸುಷ್ಮಾ ಖಂಡಪ್ಪಗೌಡ್ರ, ಕೋಶಾಧ್ಯಕ್ಷರಾದ ಅಶ್ವಿನಿ ನೀಲಗುಂದ, ವಿ.ಎಚ್. ದೇಸಾಯಿಗೌಡ್ರ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಸಮಾರಂಭದಲ್ಲಿ ವಿವಿಧ ಭಕ್ತಿಸೇವೆ ವಹಿಸಿದ್ದ ಮಂಜುನಾಥ ಹಿರೇಗೌಡ್ರ, ಯು.ಆರ್. ಭೂಸನೂರಮಠ, ಎಲ್.ಎಸ್. ನೀಲಗುಂದ ಅವರಿಗೆ ಗುರುರಕ್ಷೆ ನೀಡಲಾಯಿತು. ಜ್ಯೋತಿ ರಾಜೇಂದ್ರ ಗಡಾದ ಸ್ವಾಗತಿಸಿದರು. ಪ್ರಭುಗೌಡ ಪಾಟೀಲ ಕಾರ್ಯಕ್ರಮ ನಿರೂಪಿಸಿದರು. ಪ್ರಕಾಶ ಬಂಡಿ ವಂದಿಸಿದರು.
ಅಡವೀಂದ್ರಸ್ವಾಮಿ ಮಠದಲ್ಲಿ ಸುಮಾರು 45 ವರ್ಷಗಳಿಂದಲೂ ಶ್ರೀ ಅನ್ನಪೂರ್ಣೇಶ್ವರಿ ಹಾಗೂ ಶ್ರೀದೇವಿಯ ಆರಾಧನೆ ನಡೆದುಕೊಂಡು ಬಂದಿರುವುದು ಇತಿಹಾಸ. ಅಷ್ಟೂ ವರ್ಷಗಳಿಂದ ಎಲ್ಲ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಸೇವೆ ಸಲ್ಲಿಸಿರುವ ಎಲ್ಲರೂ ಅಭಿನಂದನಾರ್ಹರು. ನಾಡಿನ ಮಹಿಳೆಯರು ಅದರಲ್ಲೂ ಗದಗ-ಬೆಟಗೇರಿಯ ಯುವ ಜನರು ದಸರಾ ಮಹೋತ್ಸವದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿದ್ದಾರೆ. ಅವರಿಗೆಲ್ಲ ಶ್ರೀದೇವಿಯ ಅನುಗ್ರಹವಾಗಲಿ ಎಂದು ರೇಣುಕಾಚಾರ್ಯ ಮಂದಿರದ ಚಂದ್ರಶೇಖರ ದೇವರು ಶುಭ ಕೋರಿದರು.


