ಬೆಂಗಳೂರು:- ಜೀವ ಬೆದರಿಕೆ, ಜಾತಿ ನಿಂದನೆ ಕೇಸ್ ಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
Advertisement
ಗುತ್ತಿಗೆದಾರ ಚಲುವರಾಜು ಅವರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಮುನಿರತ್ನ ತಲೆಮರೆಸಿಕೊಂಡಿದ್ದರು.
ಇದೀಗ ಪೊಲೀಸರು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ ಅವರನ್ನು ಬಂಧಿಸಿದ್ದಾರೆ. ಕೋಲಾರದಿಂದ ಆಂಧ್ರದ ಚಿತ್ತೂರಿಗೆ ತೆರಳುತ್ತಿದ್ದ ಮುನಿರತ್ನ ಅವರನ್ನು ಮೊಬೈಲ್ ಫೋನ್ ಲೊಕೇಷನ್ ಆಧರಿಸಿ ಪತ್ತೆ ಮಾಡಲಾಗಿದೆ. ಕೇಸ್ ದಾಖಲಾದಾಗಿನಿಂದ ಮುನಿರತ್ನ ಮೇಲೆ ಪೊಲೀಸರು ನಿಗಾ ವಹಿಸಿದ್ದರು.
ಸದ್ಯ ಮುನಿರತ್ನರನ್ನು ಬಂಧಿಸಿ ಕೋಲಾರ ಪೊಲೀಸರು ಬೆಂಗಳೂರಿಗೆ ಕರೆತರುತ್ತಿದ್ದಾರೆ. ಬೆಂಗಳೂರಿಗೆ ಕರೆತಂದ ಬಳಿಕ ಅವರನ್ನು ಬೆಂಗಳೂರು ಪೊಲೀಸರಿಗೆ ಹಸ್ತಾಂತರ ಮಾಡಲಿದ್ದಾರೆ.