ನಟ ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ: 5 ಕೋಟಿ ಕೋಟಿಗೆ ಡಿಮ್ಯಾಂಡ್ ಮಾಡಿದ ಬಿಷ್ಣೋಯ್‌ ಗ್ಯಾಂಗ್‌!

0
Spread the love

ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ ಬಂದಿದೆ. 5 ಕೋಟಿಗೆ ಬಿಷ್ಣೋಯ್‌ ಗ್ಯಾಂಗ್‌ ಡಿಮ್ಯಾಂಡ್ ಮಾಡಿದೆ. ರಾತ್ರಿ ಮುಂಬೈ ಸಂಚಾರ ಪೊಲೀಸರ ವಾಟ್ಸಾಪ್ ಸಹಾಯವಾಣಿಗೆ ಬೆದರಿಕೆ ಸಂದೇಶ ಕಳುಹಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Advertisement

ಸಂದೇಶ ಕಳುಹಿಸಿದವರು ನಟನಿಗೆ ಬೆದರಿಕೆ ಹಾಕಿ 5 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದಾರೆ. ಇದನ್ನು ಬಿಷ್ಣೋಯ್ ಗ್ಯಾಂಗ್ ಪರವಾಗಿ ಮಾಡಲಾಗುತ್ತಿದೆ ಎಂದು ಹೇಳಿಕೊಂಡಿದ್ದಾರೆ. ಇದಲ್ಲದೆ, ವ್ಯಕ್ತಿಯು ‘ಮೈ ಸಿಕಂದರ್ ಹೂನ್’ ಹಾಡಿನ ಗೀತರಚನೆಕಾರನಿಗೂ ಬೆದರಿಕೆ ಹಾಕಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಸಂಚಾರ ಅಧಿಕಾರಿಗಳ ದೂರಿನ ಮೇರೆಗೆ ವರ್ಲಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಕಳೆದ ಕೆಲವು ವಾರಗಳಲ್ಲಿ, ಟ್ರಾಫಿಕ್ ಪೊಲೀಸ್ ಸಹಾಯವಾಣಿಗೆ ಸಲ್ಮಾನ್ ಖಾನ್‌ಗೆ ಹಲವು ಬೆದರಿಕೆ ಸಂದೇಶಗಳು ಬಂದಿವೆ.


Spread the love

LEAVE A REPLY

Please enter your comment!
Please enter your name here