ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ಶರಣ್ ಪಂಪ್ವೆಲ್, ಭರತ್ ಕುಮ್ಡೇಲ್’ಗೆ ಜೀವ ಬೆದರಿಕೆ! ಪೋಸ್ಟ್ ವೈರಲ್

0
Spread the love

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಿಂದ ಇಡೀ ಕಡಲನಗರಿಯೇ ಬೆಚ್ಚಿಬಿದ್ದಿದೆ. ಹಂತಕರ ಬೇಟೆಗಾಗಿ ಕಳೆದೆರಡು ದಿನಗಳಿಂದ ಪೊಲೀಸರು ಕಾರ್ಯಾಚರಣೆ ಶುರುಮಾಡಿದ್ದರು. ಅಷ್ಟೇ ಅಲ್ಲದೇ 8 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗ್ತಿದೆ. ಇದೀಗ  ಹಿಂದೂ ಮುಖಂಡರಿಗೆ ಕಿಡಿಗೇಡಿಗಳಿಂದ ಜೀವ ಬೆದರಿಕೆ ಹಾಕಲಾಗುತ್ತಿದೆ. ಮುಂದಿನ ಟಾರ್ಗೆಟ್ ಶರಣ್​ ಪಂಪ್​ವೆಲ್​ ಮತ್ತು ಭರತ್ ಕುಮ್ಡೇಲ್​ ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್ ಮಾಡಲಾಗಿದೆ.

Advertisement

ಮೇ 5ರಂದು ರಾತ್ರಿ 9.30ಕ್ಕೆ ನಿನ್ನ ಸ್ಥಳದಲ್ಲೇ ಕೊಲ್ಲುವುದಾಗಿ ಕಿಡಿಗೇಡಿಗಳು ಹಿಂದೂ ಮುಖಂಡ ಭರತ್ ಕುಮ್ಡೇಲ್‌ಗೆ ಜೀವ ಬೆದರಿಕೆ ಹಾಕಿದ್ದು, ಪೋಸ್ಟ್ ವೈರಲ್ ಮಾಡಿದ್ದಾರೆ. ಭರತ್ ಕುಮ್ಡೇಲ್​​ ಎಸ್​​ಡಿಪಿಐ ಮುಖಂಡ ಅಶ್ರಫ್ ಹತ್ಯೆಯ ಪ್ರಮುಖ ಆರೋಪಿ.

ಎಸ್​​ಡಿಪಿಐನಲ್ಲಿ ಮುಂಚೂಣಿಯಲ್ಲಿದ್ದ ಮುಖಂಡ ಅಶ್ರಫ್ ಕಲಾಯಿ ಅನ್ನು 2017ರ ಜೂನ್ 21ರಂದು ಬಂಟ್ವಾಳದ ಬೆಂಜನಪದವು ಎಂಬಲ್ಲಿ ಬರ್ಬರವಾಗಿ ಹತ್ಯೆಗೈದಿದ್ದರು. ಅಶ್ರಫ್ ಕೊಲೆ ಬಳಿಕ ಪ್ರತೀಕಾರವಾಗಿ ಶರತ್ ಮಡಿವಾಳ ಹತ್ಯೆಯಾಗಿತ್ತು. ಅಶ್ರಫ್ ಕೊಂದ ಭರತ್​​ ನನ್ನ ಮರೆತಿಲ್ಲ. Wait and watch ಎಂದು ಕೇವಲ ಎಂಟು ಗಂಟೆ ಮೊದಲು On fixed leader ಎಂಬ ಹೆಸರಿನ ಇನ್​​ಸ್ಟಾಗ್ರಾಂ ಪೇಜ್​ನಲ್ಲಿ ಮತ್ತೊಂದು ಪೋಸ್ಟ್ ಹಂಚಿಕೊಳ್ಳಲಾಗಿದೆ.

ಭರತ್ ಕುಮ್ಡೇಲ್​ ಮಾತ್ರವಲ್ಲದೇ ವಿಶ್ವ ಹಿಂದೂ ಪರಿಷತ್​ ಮುಖಂಡ ಶರಣ್ ಪಂಪ್​ವೆಲ್​​ಗೂ ಜೀವ ಬೆದರಿಕೆ ಹಾಕಲಾಗಿದೆ. ಮುಂದಿನ ಟಾರ್ಗೆಟ್ ಶರಣ್ ಪಂಪ್​ವೆಲ್, ಶರಣ್ ಹತ್ಯೆಯಾಗಲು ತಯಾರಾಗಿರು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಲಾಗಿದೆ.


Spread the love

LEAVE A REPLY

Please enter your comment!
Please enter your name here