ಪ್ರತಿದಿನ ತಪ್ಪದೆ 2 ಎಸಳು ಹಸಿ ಬೆಳ್ಳುಳ್ಳಿ ತಿನ್ನುವುದರಿಂದ ಸಿಗುವ ಲಾಭಗಳೇನು..?

0
Spread the love

ಆಹಾರದಲ್ಲಿ ಬೆಳ್ಳುಳ್ಳಿ ಬಳಸುವುದು ರುಚಿಯನ್ನು ಹೆಚ್ಚಿಸುವುದಷ್ಟೇ ಅಲ್ಲ, ಆರೋಗ್ಯಕ್ಕೂ ಅನೇಕ ಪ್ರಯೋಜನಗಳನ್ನು ನೀಡುತ್ತದೆ. ವಿಶೇಷವಾಗಿ ಹಸಿ ಬೆಳ್ಳುಳ್ಳಿ ಎಸಳುಗಳ ನಿಯಮಿತ ಸೇವನೆ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ಬಹಳ ಸಹಾಯಕಾರಿಯಾಗಿದೆ ಎಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ.

Advertisement

ಆದಾಗ್ಯೂ, ಹಲವರಿಗೆ ಯಾವಾಗ ಹಾಗೂ ಎಷ್ಟು ಪ್ರಮಾಣದಲ್ಲಿ ಸೇವಿಸಬೇಕು ಎಂಬ ಗೊಂದಲ ಇರುವುದರಿಂದ ಆರೋಗ್ಯ ತಜ್ಞರು ಇದರ ಬಗ್ಗೆ ತಿಳಿಸಿದ್ದಾರೆ.

ತಜ್ಞರ ಪ್ರಕಾರ, ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಎರಡು ಎಸಳು ಹಸಿ ಬೆಳ್ಳುಳ್ಳಿ ತಿನ್ನುವುದು ಅತ್ಯುತ್ತಮ. ಇದು ಆರೋಗ್ಯಕರ ಜೀವನಶೈಲಿಯನ್ನು ರೂಢಿಸಲು ಸಹಕಾರಿ ಆಗುವುದಲ್ಲದೆ, ದೇಹದ ಹಲವು ಸಮಸ್ಯೆಗಳನ್ನು ಕಡಿಮೆ ಮಾಡುವಲ್ಲಿಯೂ ಪರಿಣಾಮಕಾರಿ.

ಹಸಿ ಬೆಳ್ಳುಳ್ಳಿಯ ಸೇವನೆಯ ಪ್ರಮುಖ ಪ್ರಯೋಜನಗಳು

ಮಧುಮೇಹ ರೋಗಿಗಳಿಗೆ ಹಿತಕಾರಿ

ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಿ ಒಳ್ಳೆಯ ಕೊಲೆಸ್ಟ್ರಾಲ್ ಹೆಚ್ಚಿಸುತ್ತದೆ

ಹೃದಯದ ಆರೋಗ್ಯವನ್ನು ಕಾಪಾಡುತ್ತದೆ

ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ

ಬೆಳ್ಳುಳ್ಳಿಯಲ್ಲಿರುವ ಸೂಕ್ಷ್ಮಾಣು ವಿರೋಧಿ ಗುಣಗಳು ಸಾಲ್ಮೊನೆಲ್ಲಾ ಮತ್ತು ಇ.ಕೊಲಿ ಬ್ಯಾಕ್ಟೀರಿಯಾ ವಿರುದ್ಧ ಪರಿಣಾಮಕಾರಿ ಆಗಿದ್ದು, ದೇಹವನ್ನು ಕಾಯಿಲೆಗಳಿಂದ ರಕ್ಷಿಸುತ್ತದೆ.

ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸಲು ಬಯಸುವವರು ದಿನನಿತ್ಯ ಹಸಿ ಬೆಳ್ಳುಳ್ಳಿಯ ಸೇವನೆಯನ್ನು ಆಹಾರದಲ್ಲಿ ಸೇರಿಸಿಕೊಳ್ಳುವಂತೆ ಆರೋಗ್ಯ ತಜ್ಞರು ಸಲಹೆ ನೀಡಿದ್ದಾರೆ.


Spread the love

LEAVE A REPLY

Please enter your comment!
Please enter your name here