ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದ ತುಂತುರು ಮಳೆ ಸುರಿಯುತ್ತಿದ್ದು, ರಾಜ್ಯದಾದ್ಯಂತ ಚಳಿ ಹೆಚ್ಚಳವಾಗಿದೆ.
ಎಸ್, ಇಂದು ಬೆಳ್ಳಂಬೆಳಗ್ಗೆಯೇ ಬೆಂಗಳೂರಿನಲ್ಲಿ ತುಂತುರು ಮಳೆ ಶುರುವಾಗಿದೆ. ಮೋಡಕವಿದ ವಾತಾವರಣವಿದ್ದು, ಚಳಿ ಕೂಡ ಮುಂದುವರೆದಿದೆ. ಡಿಸೆಂಬರ್ 4ರವರೆಗೂ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.
ವಿಜಯಪುರ ಹಾಗೂ ಬೀದರ್ನಲ್ಲಿ 12.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಡಿಟ್ವಾ ಚಂಡಮಾರುತದ ಪರಿಣಾಮದಿಂದಾಗಿ ಆಂಧ್ರಪ್ರದೇಶ, ತಮಿಳುನಾಡು ಹಾಗೂ ಕರ್ನಾಟಕದ ಕೆಲವೆಡೆ ಒಂದೆರಡು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ. ಡಿಸೆಂಬರ್ 4ರ ಬಳಿಕ ರಾಜ್ಯದೆಲ್ಲೆಡೆ ಒಣಹವೆ ಮುಂದುವರೆಯಲಿದೆ. ಮುಂದಿನ ಒಂದೆರಡು ದಿನಗಳಲ್ಲಿ ಕನಿಷ್ಠ ಉಷ್ಣಾಂಶ 2 ರಿಂದ 3ಡಿಗ್ರಿ ಸೆಲ್ಸಿಯಸ್ನಷ್ಟು ಕಡಿಮೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, 24 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿದೆ.


