ಬೆಂಗಳೂರು: ಬೆಳ್ಳಂಬೆಳಗ್ಗೆಯೇ ಬೆಂಗಳೂರಿನಲ್ಲಿ ವರುಣ ತಂಪೆರೆದಿದ್ದಾನೆ. ಮೆಜೆಸ್ಟಿಕ್, ಯಶವಂತಪುರ , ಜಯನಗರ, ಬನಶಂಕರಿ ಸೇರಿದಂತೆ ಬೆಂಗಳೂರು ನಗರದ ಹಲವು ಕಡೆಗಳಲ್ಲಿ ಬೆಳಗ್ಗೆ ಭಾರಿ ಮಳೆ ಸುರಿಯಿತು.
ಒಡಿಶಾ ಕರಾವಳಿಯಲ್ಲಿ ಸೈಕ್ಲೋನ್ ಪರಿಣಾಮದಿಂದ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವೆಡೆ ಇಂದು ಮತ್ತು ನಾಳೆ ಸಹ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.



