ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಹಗುರ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಕರ್ನಾಟಕದ ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಚಿಕ್ಕಮಗಳೂರು, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.



