ನೆಲಮಂಗಲ: ತಾಲ್ಲೂಕಿನಾದ್ಯಂತ ಬುಧವಾರ ಸಂಜೆ ಸುರಿದ ಗುಡುಗು ಸಹಿತ ಭಾರಿ ಮಳೆಯ ನಡುವೆ ಸಿಡಿಲು ಬಡಿದು ತೆಂಗಿನ ಮರವೊಂದು ಹೊತ್ತಿ ಉರಿದ ಘಟನೆ ನಡೆದಿದೆ.
ಬೂದಿಹಾಲ್ನ ಭೋವಿಪಾಳ್ಯ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತೆಂಗಿನ ಮರಕ್ಕೆ ನೇರವಾಗಿ ಸಿಡಿಲು ಬಡಿದ ಪರಿಣಾಮ ಮರದ ಮೇಲ್ಭಾಗದಲ್ಲಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲೇ ಮರ ಸಂಪೂರ್ಣವಾಗಿ ಹೊತ್ತಿ ಉರಿಯತೊಡಗಿದೆ.
ಸಿಡಿಲು ಬಡಿದ ರಭಸಕ್ಕೆ ಬೆಂಕಿ ಜ್ವಾಲೆ ಕಂಡು ಗ್ರಾಮಸ್ಥರು ಕೆಲಕಾಲ ಆತಂಕಗೊಂಡಿದ್ದರು. ಮಳೆಯ ನಡುವೆ ಮರ ಉರಿಯುತ್ತಿರುವ ದೃಶ್ಯ ಸ್ಥಳೀಯರಲ್ಲಿ ಭಯದ ವಾತಾವರಣ ಸೃಷ್ಟಿಸಿತು.
ಘಟನೆಯ ಬಳಿಕ ಬೆಂಕಿ ಕ್ರಮೇಣ ಕಡಿಮೆಯಾಗಿದ್ದು, ಯಾವುದೇ ಮಾನವ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.



