ಲಿಂಗಾಯತ ಧರ್ಮ ಭಾಷೆ ಕನ್ನಡ: ಡಾ. ತೋಂಟದ ಸಿದ್ದರಾಮ ಮಹಾಸ್ವಾಮಿಗಳು

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಕನ್ನಡ ನಾಡು-ನುಡಿ, ನೆಲ-ಜಲದ ಸಮಸ್ಯೆಗಳು ಎದುರಾದಾಗ ಅನೇಕ ಹೋರಾಟಗಳಲ್ಲಿ ತೋಂಟದಾರ್ಯ ಮಠದ ಪಾತ್ರ ಹಿರಿದು. ಮಠಗಳು ಕನ್ನಡ ಉಳಿವಿಗಾಗಿ, ಬೆಳವಣಿಗೆಗಾಗಿ ಪ್ರಯತ್ನಿಸಿದಾಗ ನಮ್ಮ ನಾಡು-ನುಡಿ, ಸಂಸ್ಕೃತಿ, ಸಾಹಿತ್ಯ ಬೆಳೆಯಲು ಸಾಧ್ಯ ಎಂದು ಜಗದ್ಗುರು ಡಾ. ತೋಂಟದ ಸಿದ್ದರಾಮ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು.

Advertisement

ಲಿಂಗಾಯತ ಪ್ರಗತಿಶೀಲ ಸಂಘದ ವತಿಯಿಂದ ನಡೆದ 2770ನೇ ಶಿವಾನುಭವದ ಸಾನ್ನಿಧ್ಯ ವಹಿಸಿ ಮಾತನಾಡಿದ ಶ್ರೀಗಳು, ಕರ್ನಾಟಕದ ಗಡಿಭಾಗ ಚಿಂಚಣಿಯಲ್ಲಿ ಹಾಗೂ ಬೈರನಟ್ಟಿಯಲ್ಲಿ ಭಾಷೆಯ ಉಳಿವಿಗಾಗಿ ಕನ್ನಡ ರಥವನ್ನು ಎಳೆಯುತ್ತಾರೆ. ಕರ್ನಾಟಕದಲ್ಲಿ ಕನ್ನಡ ಮಠವೆಂದರೆ ತೋಂಟದಾರ್ಯ ಮಠ. ಕನ್ನಡ ಜಗದ್ಗುರುಗಳೆಂದರೆ ಸಿದ್ದಲಿಂಗ ಶ್ರೀಗಳು. 600ಕ್ಕೂ ಹೆಚ್ಚು ಕನ್ನಡ ಮೌಲಿಕ ಗ್ರಂಥಗಳನ್ನು ಪ್ರಕಟಿಸುವ ಮೂಲಕ ಕನ್ನಡ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದ್ದಾರೆ ಎಂದು ಶ್ರೀಗಳು ಮಾತನಾಡಿದರು.

ಹು-ಧಾ ಮಹಾನಗರಸಭೆ ನೀಡುವ ರಾಜ್ಯೋತ್ಸವ ಧೀಮಂತ ಪ್ರಶಸ್ತಿಗೆ ಭಾಜನರಾದ ಶಶಿಧರ ತೋಡಕರ ಅವರನ್ನು, ಕನ್ನಡ ಜಾನಪದ ಪರಿಷತ್‌ಗೆ ನೂತನವಾಗಿ ಜಿಲ್ಲಾಧ್ಯಕ್ಷರಾಗಿ ನೇಮಕವಾದ ನಿವೃತ್ತ ಉಪನಿರ್ದೇಶಕ ಐ.ಬಿ. ಬೆನಕೊಪ್ಪರ ಅವರನ್ನು ಮತ್ತು ನೆಲ-ಜಲ-ಭಾಷೆಗಾಗಿ ಹೋರಾಟ ಮಾಡುತ್ತಿರುವ ಕನ್ನಡ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಹನುಮಂತಪ್ಪ ಎಚ್.ಅಬ್ಬಿಗೇರಿ ಇವರುಗಳನ್ನು ಸನ್ಮಾನಿಸಲಾಯಿತು.

ವಚನ ಸಂಗೀತ ಸೇವೆಯನ್ನು ಗುರುನಾಥ್ ಸುತಾರ ಹಾಗೂ ಮೃತ್ಯುಂಜಯ ಹಿರೇಮಠ ನಡೆಸಿಕೊಟ್ಟರು. ಧಾರ್ಮಿಕ ಗ್ರಂಥ ಪಠಣವನ್ನು ಅನ್ವಿತಾ ಟಿ.ಪೋತದಾರ ಹಾಗೂ ವಚನ ಚಿಂತನವನ್ನು ತುಳಸಿಪ್ರಿಯಾ ಸಿ.ಶಿರಹಟ್ಟಿ ಮಾಡಿದರು.

ಮುಖ್ಯ ಅತಿಥಿಗಳಾಗಿ ಎಸ್.ಎಸ್. ಹರ್ಲಾಪೂರ ಉಪಸ್ಥಿತರಿದ್ದರು. ದಾಸೋಹ ಸೇವೆಯನ್ನು ಬಸಪ್ಪ ಅಮೃತಪ್ಪ ಪಲ್ಲೇದ, ಅಣ್ಣಿಗೇರಿ ವಹಿಸಿಕೊಂಡಿದ್ದರು. ತೋಂಟದಾರ್ಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಕನ್ನಡ ನಾಡು-ನುಡಿಯ ಕುರಿತು ತುಂಬಾ ಆಕರ್ಷಕವಾದ ನೃತ್ಯ ಮತ್ತು ರೂಪಕಗಳ ಪ್ರದರ್ಶನ ನಡೆಯಿತು. ವಿದ್ಯಾರ್ಥಿಗಳ ನೃತ್ಯವನ್ನು ಮನಮೋಹಕವಾಗಿ ಶಿಕ್ಷಕರು ಆಯೋಜನೆ ಮಾಡಿದ್ದರು.

ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷರಾದ ಬಾಲಚಂದ್ರ ಭರಮಗೌಡ್ರ ಉಪಾಧ್ಯಕ್ಷ ಡಾ. ಉಮೇಶ ಪುರದ ಹಾಗೂ ವಿದ್ಯಾ ಪ್ರಭು ಗಂಜಿಹಾಳ, ಕಾರ್ಯದರ್ಶಿ ವೀರಣ್ಣ ಗೋಟಡಕಿ, ಸಹ ಕಾರ್ಯದರ್ಶಿ ಸೋಮನಾಥ ಪುರಾಣಿಕ ಹಾಗೂ ನಾಗರಾಜ್ ಹಿರೇಮಠ, ಸಂಘಟನಾ ಕಾರ್ಯದರ್ಶಿ ಮಹೇಶ್ ಗಾಣಿಗೇರ, ಕೋಶಾಧ್ಯಕ್ಷ ಬಸವರಾಜ ಕಾಡಪ್ಪನವರ, ಶಿವಾನುಭವ ಸಮಿತಿಯ ಸಹ ಚೇರ್‌ಮನ್ ಶಿವಾನಂದ ಹೊಂಬಳ ಹಾಗೂ ಮಠದ ಭಕ್ತರು ಉಪಸ್ಥಿತರಿದ್ದರು. ಶಿವಾನುಭವ ಸಮಿತಿಯ ಚೇರ್‌ಮನ್ ಐ.ಬಿ. ಬೆನಕೊಪ್ಪ ಸ್ವಾಗತಿಸಿದರು. ಶರಣ ಅಶೋಕ ಹಾದಿಯನ್ನು ಕಾರ್ಯಕ್ರಮ ನಿರೂಪಿಸಿದರು.

ಧಾರವಾಡದ ಹಿರೇಮಲ್ಲೂರ ಈಶ್ವರನ್ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಶಶಿಧರ ತೋಡಕರ ಮಾತನಾಡಿ, ಕನ್ನಡ ಮತ್ತು ಕರ್ನಾಟಕ ಎರಡು ಒಂದನ್ನೊಂದು ಬಿಟ್ಟಿರಲಾರವು. ಕರ್ನಾಟಕ್ಕೆ ಗಡಿ ಇದೆ. ಆದರೆ ಕನ್ನಡಕ್ಕೆ ಗಡಿಯ ಹಂಗಿಲ್ಲ. ಲಿಂಗಾಯತರಿಗೆ ಧರ್ಮ, ಭಾಷೆ ಕನ್ನಡ ಒಂದೇ. ಸಿದ್ದಲಿಂಗ ಶ್ರೀಗಳು ಪೀಠಾಧಿಪತಿಗಳಾಗಿ ಕನ್ನಡ ಕೈಂಕರ್ಯಕ್ಕೆ ಕೊನೆಯುಸಿರು ಇರುವವರೆಗೂ ಹೋರಾಡಿದರು. ಕನ್ನಡದ ಜಗದ್ಗುರುಗಳೇ ಆದರು. ಶ್ರೀಮಠದಿಂದ 600ಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಕನ್ನಡ ಉಳಿದರೆ ನಾವೆಲ್ಲಾ ಉಳಿಯುತ್ತೇವೆ ಎಂದು ಹೇಳುತ್ತಿದ್ದರು ಎಂದು ತಿಳಿಸಿದರು.

 


Spread the love

LEAVE A REPLY

Please enter your comment!
Please enter your name here