ಗಾಂಜಾ ಮತ್ತು ಮಾದಕ ದ್ರವ್ಯ ದಂಧೆಕೋರರೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ತಮಿಳು ನಟ ಮನ್ಸೂರ್ ಅಲಿ ಖಾನ್ ಪುತ್ರ ಅಲಿ ಖಾನ್ ತುಘಲಕ್ ನನ್ನು ಚೆನ್ನೈ ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ.
ಗಾಂಜಾ ವ್ಯಾಪಾರದಲ್ಲಿ ತೊಡಗಿರುವ ವ್ಯಕ್ತಿಗಳು ಈ ಹಿಂದಿನಿಂದಲೂ ತುಘಲಕ್ ಜೊತೆ ಸಂಪರ್ಕ ಹೊಂದಿರುವುದಾಗಿ ಗುಪ್ತಚರ ಇಲಾಖೆಯು ಮಾಹಿತಿ ನೀಡಿದ ನಂತರ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಹತ್ತು ಕಾಲೇಜು ವಿದ್ಯಾರ್ಥಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ.
ನಟ ಮನ್ಸೂರ್ ಅಲಿ ಖಾನ್ ವಿವಾದಗಳ ಮೂಲಕವೇ ಹೆಚ್ಚು ಹೆಚ್ಚು ಸುದ್ದಿಯಾಗಿದ್ದಾರೆ. ಕಳೆದ ಭಾರಿ ಬಹುಭಾಷಾ ನಟಿ ತ್ರಿಷಾ ಕೃಷ್ಣನ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ಭಾರೀ ಟೀಕೆಗೆ ಗುರಿಯಾಗಿದ್ದರು. ತ್ರಿಷಾ ಜೊತೆ ಬೆಡ್ ರೂಮ್ ಸೀನ್ ಮಾಡುವ ದೃಶ್ಯದಲ್ಲಿ ನಟಿಸುವ ಆಸೆ ಇದೆ ಎಂದು ಹೇಳಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದರು. ಬಳಿಕ ಮನ್ಸುರ್ ಅಲಿ ಕ್ಷಮೆ ಕೇಳಿದ್ದರು.