ಮದ್ಯ ನೀತಿ ಹಗರಣ: ದೆಹಲಿ ವಿಧಾನಸಭೆಯಲ್ಲಿ ಗದ್ದಲ ಮಾಡಿದ್ದ15 ಎಎಪಿ ಶಾಸಕರು ಸಸ್ಪೆಂಡ್!

0
Spread the love

ನವದೆಹಲಿ:- ದೆಹಲಿ ವಿಧಾನಸಭೆಯಲ್ಲಿ ಗದ್ದಲ ನಡೆಸಿದ್ದ 15 ಎಎಪಿ ಶಾಸಕರನ್ನು ಅಮಾನತು ಮಾಡಲಾಗಿದೆ. ಫೆ.5 ರ ಚುನಾವಣೆಯಲ್ಲಿ ಸೋಲನ್ನು ತಪ್ಪಿಸಿಕೊಂಡ ಕೆಲವೇ ಕೆಲವು ಉನ್ನತ ವ್ಯಕ್ತಿಗಳಲ್ಲಿ ಒಬ್ಬರಾದ ಹಿರಿಯ ಎಎಪಿ ನಾಯಕ ಗೋಪಾಲ್ ರೈ ಅವರನ್ನು ಸಹ ವಿಧಾನಸಭೆಯಿಂದ ಅಮಾನತು ಮಾಡಲಾಯಿತು.

Advertisement

ಹೌದು, ಮದ್ಯ ನೀತಿ ಹಗರಣದ ಕುರಿತು ಲೆಕ್ಕಪರಿಶೋಧಕರ ವರದಿಗೆ ಸಂಬಂಧಿಸಿದಂತೆ ಆಡಳಿತಾರೂಢ ಬಿಜೆಪಿ ಜೊತೆಗೆ ಗದ್ದಲದ ವೇಳೆ ಮಾಜಿ ಮುಖ್ಯಮಂತ್ರಿ ಅತಿಶಿ ಸೇರಿದಂತೆ 15 ಮಂದಿ ಎಎಪಿ ಶಾಸಕರನ್ನು ದೆಹಲಿ ವಿಧಾನಸಭೆಯಿಂದ ಮಂಗಳವಾರ ಅಮಾನತುಗೊಳಿಸಲಾಗಿದೆ.

ಘಟನೆ ಹಿನ್ನೆಲೆ:-

ವಿಧಾನಸಭೆಯನ್ನುದ್ದೇಶಿಸಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರ ಆರಂಭಿಕ ಭಾಷಣದ ವೇಳೆ ಗದ್ದಲ ಪ್ರಾರಂಭವಾಯಿತು. ನೂತನ ಸಿಎಂ ರೇಖಾ ಗುಪ್ತಾ ಅವರ ಕಚೇರಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಭಗತ್‌ಸಿಂಗ್ ಅವರ ಛಾಯಾಚಿತ್ರಗಳನ್ನು ತೆಗೆದುಹಾಕಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು. ಎಎಪಿ ಶಾಸಕರು ‘ಜೈ ಭೀಮ್’ ಘೋಷಣೆಗಳನ್ನು ಕೂಗಿದರು. ಅಂಬೇಡ್ಕರ್‌ ಮತ್ತು ಭಗತ್‌ಸಿಂಗ್ ಅವರ ಛಾಯಾಚಿತ್ರಗಳನ್ನು ಹಿಡಿದು ಪ್ರತಿಭಟಿಸಿದರು.


Spread the love

LEAVE A REPLY

Please enter your comment!
Please enter your name here