ಬೆಂಗಳೂರು: ಚುನಾವಣೆ ಹತ್ತಿರವಾಗುತ್ತಿದ್ದು, ಕದನ ಕಣ ರಂಗೇರುತ್ತಿದೆ. ಮೂರು ಕ್ಷೇತ್ರಗಳಲ್ಲೂ ಮಳೆ ಬಿಸಿಲು ಎನ್ನದೆ ಪ್ರಚಾರದ ಅಖಾಡದಲ್ಲಿ ನಾಯಕರ ಬೆವರು ಹರಿಸುತ್ತಿದ್ದಾರೆ. ಜಿದ್ದು-ಪ್ರತಿಷ್ಠೆ- ಅಸ್ತಿತ್ವ ಮೂರು ಪಕ್ಷಗಳಿಗೂ ಎಲೆಕ್ಷನ್ ಗೆಲ್ಲೋದನ್ನ ಅನಿವಾರ್ಯವಾಗಿಸಿದೆ. ಇದೀಗ ಮೂರೂ ಕ್ಷೇತ್ರಗಳಲ್ಲಿ ಪ್ರಚಾರದ ಭರಾಟೆ ಜೋರಾಗಿದೆ.
ಇದೀಗ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೇ ಮಿತ್ರ ಪಕ್ಷ ಜೆಡಿಎಸ್ ಕೂಡ ತನ್ನ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್ ಮಾಡಿದೆ. ಆದರೆ ಈ ಲಿಸ್ಟ್ನಲ್ಲಿ ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಡಿ ರೇವಣ್ಣರನ್ನ ಕೈ ಬಿಡಲಾಗಿದೆ. ಹೌದು ಚನ್ನಪಟ್ಟಣ ಉಪ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಅವರು ಜೆಡಿಎಸ್ನಿಂದ ಸ್ಪರ್ಧೆ ಮಾಡುತ್ತಿದ್ದು,
ಈ ಸಂಬಂಧ ಪಕ್ಷ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್ ಮಾಡಿದೆ. ಆದರೆ ಈ ಪಟ್ಟಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಹಾಗೂ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಹೆಸರನ್ನು ಕೈ ಬಿಡಲಾಗಿದೆ. ಜೆಡಿಎಸ್ ಸ್ಟಾರ್ ಕ್ಯಾಂಪೇನರ್ಗಳ ಪಟ್ಟಿಯಲ್ಲಿ ಶಾಸಕರು, ಮಾಜಿ ಶಾಸಕರು, ಮಾಜಿ, ಹಾಲಿ ಸಂಸದರು, ಹಿರಿಯ ನಾಯಕರು, ಮಾಜಿ, ಹಾಲಿ ಎಂಎಲ್ಸಿಗಳು ಸೇರಿ ಒಟ್ಟು 40 ಪ್ರಚಾರಕರು ಹೆಸರು ಇದೆ.