ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಇತ್ತೀಚೆಗೆ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆದ ಜಿಲ್ಲಾ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಲಿಟಲ್ ಹಾರ್ಟ್ಸ್ ಇಂಟರ್‌ನ್ಯಾಶನಲ್ ಸ್ಕೂಲ್ ಶಾಲೆಯ ಮಕ್ಕಳು ಉತ್ತಮ ಪ್ರದರ್ಶನ ನೀಡಿ ಗದಗ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಾಲೆಯ ವಿದ್ಯಾರ್ಥಿಗಳಾದ ಮೇಘನಾ ಅಂದಲಗಿ ಉತ್ತಮ ನಟಿ ಹಾಗೂ ತೇಜಸ್ವಿನಿ ಅಲ್ಲಯ್ಯನವರಮಠ ಉತ್ತಮ ನಿರ್ದೇಶಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಮಕ್ಕಳ ಸಾಧನೆಗೆ, ತರಬೇತಿ ನೀಡಿದ ಶಿಕ್ಷಕಿಯರಿಗೆ ಶಾಲಾ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಾದ ಆರ್.ಎಸ್. ಬುರಡಿ, ಶಿರಹಟ್ಟಿ ತಾಲೂಕಾ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಚ್.ಎನ್. ನಾಣಕಿನಾಯಕ್, ಸಂಸ್ಥೆಯ ಅಧ್ಯಕ್ಷ ರಾಮೇಶ್ವರ ಶಿರಹಟ್ಟಿ, ಮುಖ್ಯೋಪಾಧ್ಯಾಯ ಗಂಗಾಧರ ಶಿರಹಟ್ಟಿ, ಶಿಕ್ಷಕ ವೃಂದದವರು ಹಾಗೂ ಸಿಬ್ಬಂದಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.



