HomeKarnataka Newsಪೊಲೀಸ್ ಗೌರವದೊಂದಿಗೆ ನೆರವೇರಿದ ನಟಿ ಅಪರ್ಣಾ ಅಂತ್ಯಕ್ರಿಯೆ!

ಪೊಲೀಸ್ ಗೌರವದೊಂದಿಗೆ ನೆರವೇರಿದ ನಟಿ ಅಪರ್ಣಾ ಅಂತ್ಯಕ್ರಿಯೆ!

For Dai;y Updates Join Our whatsapp Group

Spread the love

ಬೆಂಗಳೂರು: ಕನ್ನಡದ ಕಿರುತೆರೆಯಲ್ಲಿ ನಿರೂಪಕಿಯಾಗಿ ಜನಪ್ರಿಯವಾಗಿದ್ದಂತ ಅಪರ್ಣಾ ಅವರು ಇನ್ನಿಲ್ಲವಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದಂತ ಖ್ಯಾತ ನಿರೂಪಕಿ ಅಪರ್ಣಾ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಇನ್ನೂ  ನಟಿ ಹಾಗೂ ನಿರೂಪಕಿ ಅಪರ್ಣಾ ಅಂತ್ಯಕ್ರಿಯೆ ಬನಶಂಕರಿಯ ವಿದ್ಯುತ್ ಚಿತಾಗಾರದಲ್ಲಿ ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿದೆ. 2 ವರ್ಷಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣಾ ಜು.11ರಂದು ಬನಶಂಕರಿಯ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ.

ಚಿತ್ರರಂಗಕ್ಕೆ ಕಳೆದ 3 ದಶಕಗಳಿಂದ ಸೇವೆ ಸಲ್ಲಿಸಿರುವ ನಟಿಗೆ ಗಾಳಿಯಲ್ಲಿ 3 ಸುತ್ತು ಗುಂಡು ಹಾರಿಸುವ ಮೂಲಕ ಪೊಲೀಸ್ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿದೆ. ಈ ವೇಳೆ, ದುಃಖದಲ್ಲಿರುವ ಅಪರ್ಣಾ ಪತಿ ನಾಗರಾಜ್‌ಗೆ ಸೃಜನ್ ಧೈರ್ಯ ತುಂಬಿದ್ದಾರೆ. ಸೃಜನ್ ಲೋಕೇಶ್ ಸೇರಿದಂತೆ ಅನೇಕರು ಅಪರ್ಣಾ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!