ಬ್ಯಾಂಕ್ ದರೋಡೆಯಲ್ಲಿ ಶಾಮೀಲಾದ ಸ್ಥಳೀಯರಿಗೆ ರಾಜಕೀಯ ಬೆಂಬಲವಿದೆ: ಭರತ್‌ ಶೆಟ್ಟಿ ಆರೋಪ

0
Spread the love

ಮಂಗಳೂರು: ಬ್ಯಾಂಕ್ ದರೋಡೆಯಲ್ಲಿ ಶಾಮೀಲಾದ ಸ್ಥಳೀಯರಿಗೆ ರಾಜಕೀಯ ಬೆಂಬಲವಿದೆ ಎಂದು ಬಿಜೆಪಿ ಶಾಸಕ ಭರತ್‌ ಶೆಟ್ಟಿ ಆರೋಪ ಮಾಡಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಗೆ ಮಾಹಿತಿ ಬಂದಿದೆ.

Advertisement

ದರೋಡೆ ಪ್ರಕರಣದಲ್ಲಿ ಶೇಕಡಾ 100 ರಷ್ಟು ಸ್ಥಳೀಯರು ಇದ್ದಾರೆ. ದರೋಡೆಕೋರರನ್ನ ಬಂಧಿಸಿದ್ದಾರೆ ಆದರೆ ಪ್ಲಾನಿಂಗ್ ಮಾಡಿದವರನ್ನು, ಕುಮ್ಮಕ್ಕು ನೀಡಿದವರನ್ನು ಬಚಾವ್ ಮಾಡಲಾಗುತ್ತಿದೆ ಎಂದಿದ್ದಾರೆ.ಸ್ಥಳೀಯರನ್ನು ಯಾರೋ ಬಚಾವ್ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಇದೆ.

ನೈಜ ಆರೋಪಿಗಳನ್ನು ಬಯಲಿಗೆ ತನ್ನಿ. ದರೋಡೆಕೊರರಿಗೆ ರಾಜಕೀಯ ಬೆಂಬಲ ಇದೆ. ಅವರನ್ನು ರಕ್ಷಣೆ ಮಾಡುವ ಕಾರ್ಯ ನಡೆಯುತ್ತಿದೆ. ಬೇರೆ ಪ್ರಕರಣಗಳಲ್ಲಿ ಶಾಮೀಲಾದವರೂ ದರೋಡೆ ಪ್ರಕರಣದಲ್ಲಿದ್ದಾರೆ ಎಂದು ಭರತ್ ಶೆಟ್ಟಿ ಆರೋಪಿಸಿದ್ದಾರೆ.

 


Spread the love

LEAVE A REPLY

Please enter your comment!
Please enter your name here