HomeGadag Newsಲಾಕಪ್ ಸಾವಿನ ಪ್ರಕರಣ: ಇಬ್ಬರು ಪೊಲೀಸರು ಸಿಐಡಿ ವಶಕ್ಕೆ

ಲಾಕಪ್ ಸಾವಿನ ಪ್ರಕರಣ: ಇಬ್ಬರು ಪೊಲೀಸರು ಸಿಐಡಿ ವಶಕ್ಕೆ

For Dai;y Updates Join Our whatsapp Group

ಹಗರಿಬೊಮ್ಮನಹಳ್ಳಿ: ಪಟ್ಟಣ ಪೊಲೀಸ್ ಠಾಣೆಯಲ್ಲಿ ಕಟ್ಟಡ ಕಾರ್ಮಿಕ ಖಲೀಲುಲ್ಲಾ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾಗಿರುವ ಇಬ್ಬರು ಪೊಲೀಸರನ್ನು ಸಿಐಡಿ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

ಹೆಡ್ ಕಾನ್ ಸ್ಟೇಬಲ್ ರಾಘವೇಂದ್ರ ಹಾಗೂ ಕಾನ್ ಸ್ಟೇಬಲ್ ವೆಂಕಟೇಶ್ ಅವರನ್ನು ವಿಚಾರಣೆಗಾಗಿ ಬೆಂಗಳೂರಿನ ಸಿಐಡಿ ಕೇಂದ್ರ ಕಚೇರಿಗೆ ಕರೆದೊಯ್ಯಲಾಗಿದೆ.

ಠಾಣೆಯಲ್ಲಿ ಪೊಲೀಸರೇ ಹೊಡೆದು ಖಲೀಲುಲ್ಲಾ ಅವರನ್ನು ಸಾಯಿಸಿದ್ದಾರೆ ಎಂದು ಮೃತರ ಪತ್ನಿ ಶೈನಾಜ್ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರು ಪೊಲೀಸರನ್ನು ಬಂಧಿಸಿ ಹೂವಿನಹಡಗಲಿ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರಿಸಲಾಗಿತ್ತು.

ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದ ಬಳಿಕ, ಸಿಐಡಿ ತಂಡ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ ಇಬ್ಬರು ಆರೋಪಿಗಳನ್ನು ತಮ್ಮ ವಶಕ್ಕೆ ಪಡೆದುಕೊಂಡಿದೆ. ಬಳಿಕ ಅವರನ್ನು ವಿಚಾರಣೆಗೊಳಪಡಿಸಿ ಪ್ರಕರಣದ ತನಿಖೆಯನ್ನು ಮುಂದುವರಿಸಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img