ಕರ್ನಾಟಕದ ಹಲವು ಆರ್ಟಿಓ ಚೆಕ್ ಪೋಸ್ಟ್‌ಗಳ ಮೇಲೆ “ಲೋಕಾ” ದಾಳಿ, ಅಧಿಕಾರಿಗಳು ಶಾಕ್!

0
29062016-Bangalore- Lokayukta Offce at MS building complex in the city on Monday. Photo: Shashidhar. B
Spread the love

ಬೆಂಗಳೂರು:- ಇಂದು ಬೆಳ್ಳಂ ಬೆಳಗ್ಗೆ ಕರ್ನಾಟಕದ ಹಲವು ಆರ್‌ಟಿಓ ಚೆಕ್ ಪೋಸ್ಟ್ ‌ಗಳ ಮೇಲೆ ಲೋಕಾಯುಕ್ತ ದಾಳಿ ಮಾಡಿ ಅಧಿಕಾರಿಗಳಿಗೆ ಶಾಕ್ ಕೊಟ್ಟಿದೆ.

Advertisement

ಕರ್ನಾಟಕದಲ್ಲಿನ ಹಲವು ಆರ್ಟಿಓ ಚೆಕ್ ಪೋಸ್ಟ್ ಸಿಬ್ಬಂದಿ ವಿರುದ್ಧ ಲಂಚ ಪಡೆಯುತ್ತಿರುವ ಆರೋಪ ಕೇಳಿ ಬಂದ ಹಿನ್ನೆಲೆ, ಕೋಲಾರ, ಬೀದರ್, ವಿಜಯಪುರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿನ ಆರ್ಟಿಓ ಚೆಕ್ ಪೋಸ್ಟ್ ‌ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ಪರಿಶೀಲನೆ ನಡೆಸುತ್ತಿದ್ದಾರೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತಾಡಿಗೋಳ ಕ್ರಾಸ್ ಬಳಿ ಇರುವ ಆರ್ಟಿಓ ಚೆಕ್ ಪೋಸ್ಟ್ ಹಾಗೂ ಮುಳಬಾಗಿಲು ತಾಲೂಕು ನಂಗಲಿ ಆರ್ಟಿಓ ಚೆಕ್ ಪೋಸ್ಟ್ ಮೇಲೆ ಕೋಲಾರ ಲೋಕಾಯುಕ್ತ ಎಸ್ಪಿ ಧನಂಜಯ ನೇತೃತ್ವದ ತಂಡ ದಾಳಿ ಮಾಡಿದೆ.

ಆರ್ಟಿಓ ಚೆಕ್ ಪೋಸ್ಟ್ ಸಿಬ್ಬಂದಿ ವಿರುದ್ಧ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಸೂಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ದೂರು ಕೇಳಿಬಂದ ಆರ್ಟಿಓ ಚೆಕ್ ಪೋಸ್ಟ್ ಗಳ ಮೇಲೆ ಅಧಿಕಾರಿಗಳು ಇಂದು ಬೆಳ್ಳಂ ಬೆಳಗ್ಗೆ ದಾಳಿ ಮಾಡಿ, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಎರಡೂ ಚೆಕ್ ಪೋಸ್ಟ್ ಗಳಲ್ಲಿ ಸುಮಾರು 20 ಸಾವಿರಕ್ಕೂ ಅಧಿಕ ಹಣ ಪತ್ತೆಯಾಗಿದೆ. ಅಧಿಕಾರಿಗಳಿಂದ ಪರಿಶೀಲನೆ ಮುಂದುವರೆದಿದೆ.

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಧೂಳಖೇಡ್ ಬಳಿ ಇರುವ ಆರ್ಟಿಓ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ಎಸ್ಪಿ ಮಲ್ಲೇಶ ನೇತೃತ್ವದ ತಂಡ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ.

ಹಾಗೇ, ಬಳ್ಳಾರಿ ತಾಲೂಕಿನ ಪಿಡಿ‌ ಹಳ್ಳಿ ಸಮೀಪದ ಆರ್ಟಿಓ ಚೆಕ್‌ ಪೋಸ್ಟ್ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದ ತಂಡ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ದಾಳಿ ಮಾಡಿ ಪರಿಶೀಲಿಸಿದ್ದಾರೆ.

ಬಳ್ಳಾರಿ ತಾಲೂಕಿನ ಪಿಡಿಹಳ್ಳಿ ಸಮೀಪದ RTO ಚೆಕ್ ಪೋಸ್ಟ್ ಮೇಲೂ ಲೋಕಾ ರೇಡ್ ನಡೆದಿದ್ದು, ಶೋಧ ಮುಂದುವರಿದಿದೆ.


Spread the love

LEAVE A REPLY

Please enter your comment!
Please enter your name here