ಭ್ರಷ್ಟ ಅಧಿಕಾರಿಗೆ ‘ಲೋಕಾ’ ಶಾಕ್: ಗದಗ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕನ ಮನೆ ಸೇರಿ 6 ಕಡೆ ಪರಿಶೀಲನೆ!

0
Spread the love

ಗದಗ:- ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದಿಸಿದ ಆರೋಪದಡಿ ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ಅದರಂತೆ ಗದಗ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಗಂಗಾಧರ ಶಿರೋಳ ಮನೆ ಮೇಲೆ ದಾಳಿ ನಡೆದಿದೆ. ಗಂಗಾಧರ ಶಿರೋಳ ಮನೆ, ಕಚೇರಿ ಹಾಗೂ ಅಳಿಯ, ಭಾವನ ಮನೆಗಳು ಸೇರಿ ಆರು ಕಡೆ ದಾಳಿ ನಡೆಸಿ ಪರಿಶೀಲಿಸಿದೆ.

Advertisement

ಗದಗ ನಗರದ ಹುಡ್ಕೋ ಕಾಲೋನಿಯ ಗಂಗಾಧರ ಶಿರೋಳ ಮನೆ, ಗದಗ ನಗರದ ಅಳಿಯ ವಿಜಯ ಯಳಮಲಿ, ಭಾವ ನಾಗರಾಜ್ ಅಕ್ಕಿ ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿ ಎಸ್ ಎಸ್ ಶೆಟ್ಟರ್ ಹಾಗೂ ಹಾವೇರಿ ಜಿಲ್ಲೆಯಲ್ಲಿ ಸಂಬಂಧಿಕರ ಮನೆ ಮೇಲೆ ದಾಳಿ ನಡೆಸಿ ಇಂಚಿಂಚೂ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಲೋಕಾಯುಕ್ತ ಎಸ್ಪಿ ಹಣಮಂತರಾಯ, ಡಿವೈಎಸ್ಪಿ ವಿಜಯ ಬಿರಾದಾರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಹಲವು ಮಹತ್ತರ ದಾಖಲೆ ಪರಿಶೀಲಿಸುತ್ತಿದ್ದಾರೆ. ಇನ್ನೂ ಗದಗ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾಗಿರುವ ಗಂಗಾಧರ ಶಿರೋಳ ಅವರು ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿರುವ ಆರೋಪ ಕೇಳಿ ಬಂದಿತ್ತು. ಹೀಗಾಗಿ ಲೋಕಾ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here