Breaking News: ಕರ್ನಾಟಕದಾದ್ಯಂತ ಬೆಳ್ಳಂಬೆಳಗ್ಗೆ 56 ಕಡೆ ಲೋಕಾಯುಕ್ತ ದಾಳಿ!

0
Spread the love

ಬೆಂಗಳೂರು:- ಇಂದು ಕರ್ನಾಟಕದಾದ್ಯಂತ ಬೆಳ್ಳಂ ಬೆಳಗ್ಗೆ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಶಾಕ್ ಕೊಟ್ಟಿದ್ದಾರೆ. ಹೌದು, ರಾಜ್ಯಾದ್ಯಂತ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

Advertisement

ರಾಜ್ಯದ 9 ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. 11 ಪ್ರಕರಣಗಳಲ್ಲಿ 9 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ ಲೋಕಾಯುಕ್ತ ಅಧಿಕಾರಿಗಳು. 100 ಅಧಿಕಾರಿಗಳ ತಂಡ ರಾಜ್ಯದ 56 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.

ಕಲಬುರಗಿ, ಧಾರವಾಡ, ಚಿತ್ರದುರ್ಗ, ಬೆಳಗಾವಿ, ಮಂಡ್ಯ, ದಾವಣಗೆರೆ, ಕೋಲಾರ, ಮೈಸೂರು, ಹಾಸನ ಹಾಗೂ ಚಿತ್ರದುರ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


Spread the love

LEAVE A REPLY

Please enter your comment!
Please enter your name here