• About
  • Advertise
  • Privacy & Policy
  • Contact
Wednesday, November 4, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

Vijaya Sakshi News Desk by Vijaya Sakshi News Desk
November 4, 2026
in Gadag News
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ
0
SHARES
41
VIEWS
Share on Facebook

ಲಕ್ಷ್ಮೇಶ್ವರ-ಶಿರಹಟ್ಟಿ: ಗದಗ ಜಿಲ್ಲೆಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಅವರು ನವೆಂಬರ್ 5ರಂದು ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಬುಧವಾರದಿಂದಲೇ ಲಕ್ಷ್ಮೇಶ್ವರ ಹಾಗೂ ಶಿರಹಟ್ಟಿ ತಾಲೂಕುಗಳಲ್ಲಿ ಸರ್ಕಾರಿ ಕಚೇರಿಗಳ ಪರಿಶೀಲನೆ ಆರಂಭಿಸಿದೆ. ತಹಸೀಲ್ದಾರ್ ಕಚೇರಿ, ಸರ್ಕಾರಿ ಆಸ್ಪತ್ರೆ, ವಸತಿ ನಿಲಯ ಸೇರಿದಂತೆ ವಿವಿಧೆಡೆ ದಿಢೀರ್ ಭೇಟಿ ನೀಡಿ ಕಡತಗಳು, ದಾಖಲೆಗಳು ಹಾಗೂ ಸಾರ್ವಜನಿಕರ ಅರ್ಜಿಗಳ ವಿಲೇವಾರಿ ಕುರಿತು ಮಾಹಿತಿ ಸಂಗ್ರಹಿಸಿದೆ. ಅಧಿಕಾರಿಗಳ ದಿಢೀರ್ ಭೇಟಿಯಿಂದ ಸರ್ಕಾರಿ ಕಚೇರಿಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ.

ಲಕ್ಷ್ಮೇಶ್ವರ ತಹಸೀಲ್ದಾರ್ ಕಚೇರಿಗೆ ಭೇಟಿ ನೀಡಿದ ಅಧಿಕಾರಿಗಳ ತಂಡ ವಿವಿಧ ಇಲಾಖೆಗಳ ಕಡತಗಳನ್ನು ಪರಿಶೀಲಿಸಿತು. ಸಾರ್ವಜನಿಕರಿಂದ ಸ್ವೀಕೃತವಾಗಿರುವ ಅರ್ಜಿಗಳನ್ನು ವಿಳಂಬ ಮಾಡದೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿತು. ಶಿರಹಟ್ಟಿ ತಾಲೂಕು ಕೇಂದ್ರದ ವಿವಿಧ ಸರ್ಕಾರಿ ಕಚೇರಿಗಳಿಗೂ ಭೇಟಿ ನೀಡಿ ಆಡಳಿತಾತ್ಮಕ ಕಾರ್ಯವೈಖರಿ ಹಾಗೂ ದಾಖಲೆಗಳ ನಿರ್ವಹಣೆ ಪರಿಶೀಲಿಸಿತು.

            ಆಸ್ಪತ್ರೆ ಸ್ವಚ್ಛತೆಗೆ ಖಡಕ್ ಸೂಚನೆ

ಲಕ್ಷ್ಮೇಶ್ವರದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಲೋಕಾಯುಕ್ತ ಅಧಿಕಾರಿಗಳು ಶೌಚಾಲಯ, ಮೂತ್ರಾಲಯ ಹಾಗೂ ಸ್ನಾನಗೃಹಗಳ ಸ್ವಚ್ಛತೆಯನ್ನು ಪರಿಶೀಲಿಸಿದರು. ದಿನಕ್ಕೆ ಮೂರು ಬಾರಿ ಸ್ವಚ್ಛಗೊಳಿಸಿ, ಯಾವುದೇ ಕಾರಣಕ್ಕೂ ದುರ್ವಾಸನೆ ಬಾರದಂತೆ ನೋಡಿಕೊಳ್ಳಬೇಕು ಎಂದು ಗುತ್ತಿಗೆ ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಕಳೆದ ಎರಡು ತಿಂಗಳಿಂದ ವೇತನ ಪಾವತಿಯಾಗಿಲ್ಲ ಎಂದು ಸ್ವಚ್ಛತಾ ಸಿಬ್ಬಂದಿ ಅಧಿಕಾರಿಗಳ ಮುಂದೆ ಅಳಲು ತೋಡಿಕೊಂಡರು. ಈ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದರು.

ಹೆರಿಗೆ ವಾರ್ಡ್‌ಗೆ ಭೇಟಿ ನೀಡಿದ ಅಧಿಕಾರಿಗಳು ಬಾಣಂತಿಯರೊಂದಿಗೆ ಸಂವಾದ ನಡೆಸಿ, ಊಟ, ಉಪಾಹಾರ ಹಾಗೂ ಚಿಕಿತ್ಸೆಗೆ ಹಣ ಪಡೆಯಲಾಗುತ್ತಿದೆಯೇ ಎಂದು ವಿಚಾರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಬಾಣಂತಿಯರು, ಆಸ್ಪತ್ರೆಯಲ್ಲಿ ಯಾರೂ ಹಣ ಕೇಳುತ್ತಿಲ್ಲ. ಊಟ ಮತ್ತು ಉಪಾಹಾರವನ್ನು ಸಮರ್ಪಕವಾಗಿ ನೀಡಲಾಗುತ್ತಿದೆ ಎಂದು ತಿಳಿಸಿದರು.

ನಂತರ ಆಸ್ಪತ್ರೆಯ ಎಕ್ಸ್‌ರೇ ವಿಭಾಗ, ರಕ್ತಭಂಡಾರ ಹಾಗೂ ಡಯಾಲಿಸಿಸ್ ವಿಭಾಗಗಳನ್ನೂ ಪರಿಶೀಲಿಸಿದರು. ಈ ವೇಳೆ ಆಡಳಿತ ವೈದ್ಯಾಧಿಕಾರಿ ಡಾ. ಶ್ರೀಕಾಂತ ಕಾಟೇವಾಲೆ ಆಸ್ಪತ್ರೆಯ ಕಾರ್ಯನಿರ್ವಹಣೆ ಕುರಿತು ಮಾಹಿತಿ ನೀಡಿದರು.

ಇದಲ್ಲದೆ ಅಲ್ಪಸಂಖ್ಯಾತರ ವಸತಿ ನಿಲಯ, ವಿದ್ಯಾರ್ಥಿನಿಯರ ಕಾಲೇಜು ವಸತಿ ನಿಲಯ ಹಾಗೂ ಉಗ್ರಾಣಕ್ಕೂ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಲೋಕಾಯುಕ್ತ ಅಧಿಕಾರಿಗಳ ತಂಡ ಮುಂದಿನ ಎರಡು ದಿನಗಳ ಕಾಲ ತಾಲೂಕಿನಲ್ಲಿ ಪರಿಶೀಲನೆ ಮುಂದುವರಿಸಲಿದ್ದು, ವಿವಿಧ ಗ್ರಾಮ ಪಂಚಾಯಿತಿಗಳು ಹಾಗೂ ಸರ್ಕಾರಿ ಕಚೇರಿಗಳಿಗೂ ಭೇಟಿ ನೀಡುವ ನಿರೀಕ್ಷೆಯಿದೆ. ಲೋಕಾಯುಕ್ತ ಇನ್ಸ್‌ಪೆಕ್ಟರ್ ಮೆಹಬೂಬಅಲಿ ನದಾಫ್ ಸೇರಿದಂತೆ ಸಿಬ್ಬಂದಿ ಇದ್ದರು.

ಸರ್ಕಾರಿ ಕಚೇರಿಗಳಲ್ಲಿನ ದಾಖಲೆಗಳ ನಿರ್ವಹಣೆ, ಕಡತಗಳ ವಿಲೇವಾರಿ ಹಾಗೂ ಸಾರ್ವಜನಿಕರಿಂದ ಸ್ವೀಕೃತವಾಗಿರುವ ಅರ್ಜಿಗಳ ಸ್ಥಿತಿಗತಿಯನ್ನು ಪರಿಶೀಲಿಸಲಾಗುತ್ತಿದೆ. ಆಡಳಿತಾತ್ಮಕ ಕಾರ್ಯವೈಖರಿಯನ್ನು ಪರಿಶೀಲಿಸುವುದೇ ಲೋಕಾಯುಕ್ತ ಭೇಟಿಯ ಮುಖ್ಯ ಉದ್ದೇಶವಾಗಿದೆ.

— ವಸಂತ, ಲೋಕಾಯುಕ್ತ ಡಿವೈಎಸ್ಪಿ

Tags: BS PatilGadag District NewsGadag LokayuktaGadag News TodayGovernment Hospital InspectionGovernment Office InspectionHospital CleanlinessJustice BS PatilKarnataka Lokayuktakarnataka newsLakshmeshwar NewslokayuktaLokayukta InspectionPublic GrievancesRevenue Departmentshirahatti newsVijayasakshivijayasakshi news
ShareSendShare
Previous Post

ಮಹಿಳೆಯ ದೇಹದಿಂದ 4.5 ಕೆ.ಜಿ. ಗಡ್ಡೆ ಹೊರತೆಗೆದ ವೈದ್ಯರು

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಮಹಿಳೆಯ ದೇಹದಿಂದ 4.5 ಕೆ.ಜಿ. ಗಡ್ಡೆ ಹೊರತೆಗೆದ ವೈದ್ಯರು

ಮಹಿಳೆಯ ದೇಹದಿಂದ 4.5 ಕೆ.ಜಿ. ಗಡ್ಡೆ ಹೊರತೆಗೆದ ವೈದ್ಯರು

November 4, 2026
A pro-development budget by a developed India

ವಿದೇಶಿ ಹಣ ಪಡೆದು ದೇಶದಲ್ಲಿ ಅರಾಜಕತೆ ಸೃಷ್ಟಿಸುತ್ತಿದ್ದಾರೆ: ರಾಹುಲ್ ವಿರುದ್ಧ ಬೊಮ್ಮಾಯಿ ಗಂಭೀರ ಆರೋಪ!

November 4, 2026
ಚಿತ್ತಾಪುರದ ಪಥಸಂಚಲನಕ್ಕೆ ಅನುಮತಿ ನಿರಾಕರಣೆ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

ಕನ್ನಡ ರಾಜ್ಯೋತ್ಸವದ ಬದಲು ಬೆಲೆ ಏರಿಕೆ ನಿತ್ಯೋತ್ಸವ: ಕಾಂಗ್ರೆಸ್ ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

November 4, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಮಹಿಳೆಯ ದೇಹದಿಂದ 4.5 ಕೆ.ಜಿ. ಗಡ್ಡೆ ಹೊರತೆಗೆದ ವೈದ್ಯರು

ಮಹಿಳೆಯ ದೇಹದಿಂದ 4.5 ಕೆ.ಜಿ. ಗಡ್ಡೆ ಹೊರತೆಗೆದ ವೈದ್ಯರು

November 4, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper