HomeBengaluru Newsಲೋಕಾಯುಕ್ತ ತನಿಖೆಗೆ ಜನಪ್ರತಿನಿಧಿಗಳ ಕೋರ್ಟ್ ಆದೇಶ: ಸಿದ್ದರಾಮಯ್ಯರ ಮೊದಲ ಪ್ರತಿಕ್ರಿಯೆ ಹೀಗಿತ್ತು!?

ಲೋಕಾಯುಕ್ತ ತನಿಖೆಗೆ ಜನಪ್ರತಿನಿಧಿಗಳ ಕೋರ್ಟ್ ಆದೇಶ: ಸಿದ್ದರಾಮಯ್ಯರ ಮೊದಲ ಪ್ರತಿಕ್ರಿಯೆ ಹೀಗಿತ್ತು!?

For Dai;y Updates Join Our whatsapp Group

Spread the love

ಬೆಂಗಳೂರು:- ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶಿಸಿದೆ.

ಜನಪ್ರತಿನಿಧಿ ಕೋರ್ಟ್​ ತೀರ್ಪಿನ ಬಗ್ಗೆ ಮೊಲದ ಬಾರಿಗೆ ಪ್ರತಿಕ್ರಿಯೆ ನೀಡಿಸಿರುವ ಸಿಎಂ, ನಿನ್ನೆ ಹೈಕೋರ್ಟ್ 17ಎ ಅನ್ವಯ ತನಿಖೆ ನಡೆಸುವಂತೆ ಆದೇಶಿಸಿತ್ತು. ಹೈಕೋರ್ಟ್​ ಆದೇಶ ಮೇಳೆ ಜನಪ್ರತಿನಿಧಿಗಳ ಕೋರ್ಟ್​ ತೀರ್ಪು ನೀಡಿದೆ/ ಕೋರ್ಟ್​ ತೀರ್ಪಿನ ಪ್ರತಿ ಸಿಕ್ಕಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ. ತನಿಖೆ ಎದುರಿಸಲು ನಾವು ತಯಾರಿದ್ದೇವೆ ಎಂದು ಸ್ಪಷ್ಟಪಡಿಸಿದರು.

ನಿನ್ನೆ ಹೈಕೋರ್ಟ್ 17ಎ ಅನ್ವಯ ತನಿಖೆ ನಡೆಸುವಂತೆ ಆದೇಶಿಸಿತ್ತು. ಹೈಕೋರ್ಟ್​ ಆದೇಶ ಮೇಳೆ ಜನಪ್ರತಿನಿಧಿಗಳ ಕೋರ್ಟ್​ ತೀರ್ಪು ನೀಡಿದೆ. ಕೋರ್ಟ್​ ತೀರ್ಪಿನ ಪ್ರತಿ ಸಿಕ್ಕಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ. ತನಿಖೆ ಎದುರಿಸಲು ನಾವು ತಯಾರಿದ್ದೇವೆ ತನಿಖೆ ಮಾಡಲು ಮೈಸೂರು ಲೋಕಾಯುಕ್ತಗೆ ಕೋರ್ಟ್​ ಸೂಚನೆ. ಪೂರ್ಣ ಆದೇಶದ ಪ್ರತಿ ಸಿಕ್ಕಿದ ಬಳಿಕ ಮುಂದಿನ ತೀರ್ಮಾನ ಎಂದರು.

ನಾವು ಯಾವುದಕ್ಕೂ ಹೆದರಲ್ಲ, ತನಿಖೆಗೆ ನಾವು ತಯಾರಿದ್ದೇವೆ. ಆದ್ರೆ ಈಗ ಕೊಟ್ಟಿರುವ ಆದೇಶವನ್ನು ಇನ್ನೂ ಓದಿಲ್ಲ. ಕೇರಳದಿಂದ ಬಂದ ಮೇಲೆ ಆದೇಶದಲ್ಲಿ ಏನಿದೆ ನೋಡುತ್ತೇನೆ. ಕೋರ್ಟ್​ ಆದೇಶ ಸಿಕ್ಕಿದ ಮೇಲೆ ವಕೀಲರ ಜತೆ ಚರ್ಚಿಸ್ತೇನೆ ಆ ನಂತರ ಸುಪ್ರೀಂಕೋರ್ಟ್​​ಗೆ ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.

ನಾವು ರಚಿಸಿರುವ ತನಿಖಾ ಆಯೋಗಕ್ಕೆ ಕೋರ್ಟ್​​ ತಡೆ ನೀಡಿಲ್ಲ. ಸಂಪೂರ್ಣವಾಗಿ ಆದೇಶ ಓದಿದ ಮೇಲೆ ನಾಳೆ ಪ್ರತಿಕ್ರಿಯೆ ನೀಡುತ್ತೇನೆ, ನಿನ್ನೆಯೂ ನಾನು ಹೇಳಿದ್ದೇನೆ, ಈಗಲೂ‌ ಪುನರುಚ್ಚರಿಸುತ್ತಿದ್ದೇನೆ. ತನಿಖೆಗೆ ನಾನು ಹೆದರುವುದಿಲ್ಲ. ದೂರುದಾರರು ಮೈಸೂರಿನವರು, ಹೀಗಾಗಿ ಅಲ್ಲೇ ತನಿಖೆ ಆಗುತ್ತೆ. ಆದೇಶ ಓದಿದ ನಂತರ ಸಂಪೂರ್ಣ ಪ್ರತಿಕ್ರಿಯೆ ನೀಡಬೇಕು. ಆದೇಶದ ಪ್ರತಿಯನ್ನು ಓದಿದ ಮೇಲೆ ಪ್ರತಿಕ್ರಿಯೆ ನೀಡುತ್ತೇನೆ ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!