ಗದಗ: ಗದಗ ಜಿಲ್ಲೆಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲಿನ ಲೋಕಾಯುಕ್ತ ದಾಳಿ ಮುಂದುವರಿದಿದೆ.

ಅದರಂತೆ ಇಂದು ಬೆಳ್ಳಂ ಬೆಳಗ್ಗೆ ಬಾಗಲಕೋಟೆ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಎಸ್.ಎಂ. ಕಾಂಬಳೆ ಅವರ ನರಗುಂದ ಪಟ್ಟಣದ ರಾಣಿ ಚೆನ್ನಮ್ಮ ನಗರದಲ್ಲಿರುವ ಮನೆ, ಕಸಬಾ ಪೇಟೆಯಲ್ಲಿ ಇರುವ ಅವರ ಸಹೋದರನ ಮನೆ ಹಾಗೂ ಬಾಗಲಕೋಟೆ ಜಿಲ್ಲಾ ಪಂಚಾಯತ್ ಕಚೇರಿ ಸೇರಿದಂತೆ ಮೂರು ಸ್ಥಳಗಳಲ್ಲಿ ಈ ದಾಳಿ ನಡೆಸಲಾಗಿದೆ.
ಬಾಗಲಕೋಟೆ ಲೋಕಾಯುಕ್ತ ಎಸ್ಪಿ ಮಲ್ಲೇಶ್ ಟಿ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಸುರೇಶ ರೆಡ್ಡಿ ಹಾಗೂ ಸಿಪಿಐ ಮಲ್ಲಿಕಾರ್ಜುನ ಬಿರಾದಾರ ನೇತೃತ್ವದಲ್ಲಿ ಹತ್ತಕ್ಕೂ ಹೆಚ್ಚು ಸಿಬ್ಬಂದಿಗಳು ಈ ಕಾರ್ಯಾಚರಣೆ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಈ ದಾಳಿ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ನಡೆದಿದೆ ಎನ್ನಲಾಗಿದೆ.



