HomeKarnataka Newsಅಕ್ರಮ ಆಸ್ತಿ ಆರೋಪ: 7 ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

ಅಕ್ರಮ ಆಸ್ತಿ ಆರೋಪ: 7 ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

For Dai;y Updates Join Our whatsapp Group

ಬೆಂಗಳೂರು: ಆದಾಯಕ್ಕಿಂತಲೂ ಅಧಿಕ ಆಸ್ತಿ ಗಳಿಕೆ ಆರೋಪದಡಿ ರಾಜ್ಯದ ವಿವಿಧ ಜಿಲ್ಲೆಗಳ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಬೆಂಗಳೂರು, ಬೆಂಗಳೂರು ದಕ್ಷಿಣ, ಚಿತ್ರದುರ್ಗ, ರಾಯಚೂರು, ಕಲಬುರಗಿ, ತುಮಕೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಒಟ್ಟು 10 ಸ್ಥಳಗಳಲ್ಲಿ ಶೋಧ ಕಾರ್ಯ ನಡೆಯುತ್ತಿದ್ದು, ದಾಖಲೆಗಳ ಪರಿಶೀಲನೆ ಮುಂದುವರೆದಿದೆ.

ಲೋಕಾಯುಕ್ತ ಅಧಿಕಾರಿಗಳ ಪ್ರಕಾರ, ಅಸಮತೋಲಿತ ಆಸ್ತಿ ಹಾಗೂ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಗ್ರಹಿಸಿರುವ ಆರೋಪಗಳ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

ದಾಳಿ ನಡೆದ ಅಧಿಕಾರಿಗಳ ವಿವರ:

  • ಬಸನಗೌಡ ಪಾಟೀಲ್ – ಎಕ್ಸಿಕ್ಯುಟಿವ್ ಇಂಜಿನಿಯರ್, ಕೃಷ್ಣಾ ಭಾಗ್ಯ ಜಲನಿಗಮ, ನಾರಾಯಣಪುರ ಬಲದಂಡೆ ಕಾಲುವೆ ವಿಭಾಗ-4, ರಾಯಚೂರು
  • ಶಂಕರ್ ಎಂ. – ಸಹಾಯಕ ಪ್ರಾಧ್ಯಾಪಕ, ಕೃಷಿ ಎಂಜಿನಿಯರಿಂಗ್ ವಿಭಾಗ, ತೋಟಗಾರಿಕೆ ವಿಶ್ವವಿದ್ಯಾಲಯ, ಚಿತ್ರದುರ್ಗ
  • ದುಗ್ಗಪ್ಪ ಬಿ.ಎಚ್. – ವಲಯ ಅರಣ್ಯಾಧಿಕಾರಿ, ಜಲಾನಯನ ಅಭಿವೃದ್ಧಿ ಇಲಾಖೆ, ಚಿತ್ರದುರ್ಗ
  • ನರೇಂದ್ರ ಕುಮಾರ್ – ಎಕ್ಸಿಕ್ಯುಟಿವ್ ಇಂಜಿನಿಯರ್, ಲೋಕೋಪಯೋಗಿ ಇಲಾಖೆ, ಬೆಂಗಳೂರು
  • ಪ್ರವೀಣ್ ಬಿ. ಶ್ರೀಹರಿ – ಸೂಪರಿಂಟೆಂಡೆಂಟ್ ಇಂಜಿನಿಯರ್, ಕರ್ನಾಟಕ ಗ್ರಾಮೀಣಾಭಿವೃದ್ಧಿ ಇಲಾಖೆ, ಬೆಂಗಳೂರು
  • ಪುಷ್ಪ ಡಿ.ಆರ್. – ಉಪ ನಿರ್ದೇಶಕಿ (ಆಡಳಿತ), ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ), ಬೆಂಗಳೂರು
  • ಮಧುಸೂಧನ್ ಎನ್. – ಸಹಾಯಕ ಇಂಜಿನಿಯರ್, ಸಣ್ಣ ನೀರಾವರಿ ಇಲಾಖೆ, ತುಮಕೂರು
  • ತಿಮ್ಮೇಗೌಡ – ಪಿಡಿಒ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು ದಕ್ಷಿಣ
  • ಕಿರಣ್ ಅಂಗಡಿ – ಸಹಾಯಕ ಅರಣ್ಯ ಪರಿವರ್ತಕ, ಸಂಶೋಧನಾ ವಿಭಾಗ, ಶಿವಮೊಗ್ಗ
  • ಅಮೃತ್ ರಾವ್ – ಸಹಾಯಕ ಇಂಜಿನಿಯರ್, ಜೆಸ್ಕಾಂ, ಕಲಬುರಗಿ

ಬೆಳಗ್ಗಿನಿಂದಲೇ ಅಧಿಕಾರಿಗಳ ನಿವಾಸ, ಕಚೇರಿ ಹಾಗೂ ಸಂಬಂಧಿತ ಸ್ಥಳಗಳಲ್ಲಿ ದಾಖಲೆಗಳು, ಆಸ್ತಿ ವಿವರಗಳು ಮತ್ತು ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ತನಿಖೆ ಪೂರ್ಣಗೊಂಡ ಬಳಿಕ ಹೆಚ್ಚಿನ ಮಾಹಿತಿ ಬಹಿರಂಗವಾಗುವ ಸಾಧ್ಯತೆ ಇದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img