ಬೀದರ: ಜಿಲ್ಲೆಯ ಹುಮನಾಬಾದ ಪಟ್ಟಣದ ಹೊರವಲಯದಲ್ಲಿರುವ ಆರ್‌ಟಿ ಓ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು ಲೋಕಾಯುಕ್ತ ತಂಡದ ಅಧಿಕಾರಿಗಳು ಶುಕ್ರವಾರ ಬೆಳಗಿನ ಜಾವ ಕಚೇರಿಗೆ ಆಗಮಿಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ವಸಂತ ಅವರ ನೇತೃತ್ವದಲ್ಲಿ ನಡೆದ ಈ ದಾಳಿಯಲ್ಲಿ ಇನ್ಸ್‌ಪೆಕ್ಟರ್‌ಗಳಾದ ಶಂಕರಪ್ಪ, ವಿಜಯಕುಮಾರ್ ಸೇರಿದಂತೆ ಇತರ ಅಧಿಕಾರಿಗಳು ಭಾಗವಹಿಸಿದ್ದರು. ದಾಳಿ ವೇಳೆ ಆರ್‌ಟಿಓ ಕಚೇರಿಯಲ್ಲಿ ಅಧಿಕಾರಿಗಳಾದ ಮಹೇಶಕುಮಾರ, ರವಿ ಶಂಕರ್ ಹಾಗೂ ಪ್ರಕಾಶ ಇದ್ದರು.
ಬೆಳಿಗ್ಗೆಯಿಂದಲೇ ಲೋಕಾಯುಕ್ತ ಅಧಿಕಾರಿಗಳ ತಂಡ ಕಚೇರಿಯ ವಿವಿಧ ದಾಖಲೆಗಳನ್ನು ಪರಿಶೀಲಿಸುತ್ತಿದ್ದು, ದಾಳಿ ಮುಂದುವರಿದಿದೆ. ಈ ದಾಳಿಯಿಂದ ಆರ್‌ಟಿಓ ಕಚೇರಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.



