ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ರಜತ್, ವಿನಯ್ ಗೌಡರನ್ನು ಬಸವೇಶ್ವರ ನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
Advertisement
ಇತ್ತೀಚೆಗೆ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದ ವಿನಯ್ ಹಾಗೂ ರಜತ್ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸದ್ದು ಮಾಡಿತ್ತು. ಅಲ್ಲದೇ ಇವರಿಬ್ಬರ ಮೇಲೆ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ರಜತ್ ಮತ್ತು ವಿನಯ್ ಬಸವೇಶ್ವರ ನಗರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು. ವಿಚಾರಣೆಯ ನಂತರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ರೀಲ್ಸ್‌ನಲ್ಲಿ ವಿನಯ್ ಗೌಡ ಲಾಂಗ್ ಹಿಡಿದು, ಕಣ್ಣಿಗೆ ಕೂಲಿಂಗ್ ಗ್ಲಾಸ್ ಹಾಕಿಕೊಂಡು ದರ್ಶನ್ ಅವರ ‘ಕರಿಯ’ ಸಿನಿಮಾದ ಸ್ಟೈಲ್‌ನಲ್ಲಿ ಸ್ಲೋ ಮೋಷನ್‌ನಲ್ಲಿ ನಡೆಯುತ್ತಿರುತ್ತಾರೆ. ಈ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗ್ತಿದೆ.
ವಿಡಿಯೋ ವೈರಲ್ ಆಗುತ್ತಿದ್ದಂತೆ ಇದೀಗ ಇಬ್ಬರನ್ನು ಅರೆಸ್ಟ್ ಮಾಡಲಾಗಿದೆ.