ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷ-ಉಪಾಧ್ಯಕ್ಷರು ಇವರೇ ನೋಡಿ!

0
Spread the love

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಅಧ್ಯಕ್ಷರು, ಉಪಾಧ್ಯಕ್ಷ ಹಾಗೂ ಪದನಿಮಿತ್ತ ಸದಸ್ಯರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗ್ರೇಟರ್​ ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಾಧ್ಯಕ್ಷರಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

Advertisement

ಇನ್ನು ಕೇಂದ್ರದಲ್ಲಿನ ಬೆಂಗಳೂರಿನ ಸಚಿವರು, ರಾಜ್ಯ ಸರ್ಕಾರದ ಬೆಂಗಳೂರಿನ ಸಚಿವರು, ನಗರದ ಸಂಸದರು, ಶಾಸಕರು ಹಾಗೂ ಎಂಎಲ್​ ಸಿಗಳು ಪದನಿಮಿತ್ತ ಸದಸ್ಯರನ್ನಾಗಿ ನೇಮಿಸಲಾಗಿದೆ. ಮುಖ್ಯವಾಗಿ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರನ್ನೂ ಸಹ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸದಸ್ಯರನ್ನಾಗಿ ಮಾಡಲಾಗಿದೆ.

ಜಿಬಿಎ ವ್ಯಾಪ್ತಿಯ 5 ಪಾಲಿಕೆಗಳ ಮೇಯರ್, ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯ ಕಾರ್ಯದರ್ಶಿ ಮತ್ತು ಪದನಿಮಿತ್ತ ಸದಸ್ಯರು ಸೇರಿ ಒಟ್ಟು 75 ಜನರನ್ನು ನೇಮಕ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಜಿಬಿಎ ಪದನಿಮಿತ್ತ ಅಧ್ಯಕ್ಷರಾಗಿದ್ದರೆ, ಉಪಾಧ್ಯಕ್ಷರಾಗಿ ಡಿಸಿಎಂ ಮತ್ತು ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಸಚಿವ ಡಿ.ಕೆ. ಶಿವಕುಮಾರ್ ಅವರನ್ನ ನೇಮಕ ಮಾಡಲಾಗಿದೆ.

Spread the love

LEAVE A REPLY

Please enter your comment!
Please enter your name here