ಬೆಂಗಳೂರು: ಲೂಟಿ ಹೊಡೆಯುವುದೇ ಕಾಂಗ್ರೆಸ್ ಸರಕಾರದ ನೀತಿಯಾಗಿದೆ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಹೇಳಿದ್ದಾರೆ.
Advertisement
ನಗರದಲ್ಲಿ ಮಾತನಾಡಿದ ಅವರು, ಲೂಟಿ ಹೊಡೆಯುವುದೇ ಕಾಂಗ್ರೆಸ್ ಸರಕಾರದ ನೀತಿಯಾಗಿದೆ. ಸಾಕ್ಷಿ ಸಮೇತ ಹಿಡಿದರೂ ಸಿಎಂ ಸಿದ್ದರಾಮಯ್ಯನವರು ರಾಜೀನಾಮೆ ಕೊಡುವುದಿಲ್ಲ. ಜನರ ಭಾವನೆಯನ್ನು ಇವರು ಗೌರವಿಸುವುದಿಲ್ಲ. ಕುರ್ಚಿಗೆ ಅಂಟಿಕೊಂಡೇ ಇರುವ ಭಂಡತನ ಇವರದು ಎಂದು ಟೀಕಿಸಿದ್ದಾರೆ.
ರಾಜ್ಯದ ಹಿತ ರಕ್ಷಣೆಗಾಗಿ ನಾವು ಭ್ರಷ್ಟ ಸರಕಾರದ ವಿರುದ್ಧ ಜನಜಾಗೃತಿ ಮೂಡಿಸಬೇಕು. ಪ್ರತಿನಿತ್ಯ ಹೋರಾಟ ಮಾಡುವುದೇ ನಮ್ಮ ಕರ್ತವ್ಯವಾಗಿದೆ.
ಇವರು ಸಂವಿಧಾನ ಕೈಯಲ್ಲಿ ಹಿಡಿದು ಹಕ್ಕುಗಳ ಬಗ್ಗೆ ಮಾತನಾಡುತ್ತಾರೆ. ಆದರೆ ತಮ್ಮ ಕರ್ತವ್ಯ, ಜವಾಬ್ದಾರಿಗಳ ಕುರಿತು ಮಾತನಾಡುವುದಿಲ್ಲ. ಸಂವಿಧಾನದ ಆಶಯಗಳನ್ನು ಗೌರವಿಸುವುದಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.