ಹುಬ್ಬಳ್ಳಿ: ಹುಬ್ಬಳ್ಳಿ-ಬೈಪಾಸ್ ನೇಕಾರ ನಗರದ ಬ್ರಿಡ್ಜ್ ಬಳಿ ತಡರಾತ್ರಿ ಲಾರಿಯೊಂದು ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಘಟನೆ ಜರುಗಿದೆ.
Advertisement
ಬೆಳಗಾವಿಯಿಂದ ತಮಿಳುನಾಡು ಕಡೆಗೆ ತೆರಳುತ್ತಿದ್ದ ಲಾರಿಗೆ, ಏಕಾಏಕಿ ಬೆಂಕಿ ಹತ್ತಿಕೊಂಡು ಬೈಪಾಸ್ ರಸ್ತೆಯಲ್ಲೆ ಲಾರಿ ಹೊತ್ತಿ ಉರಿದಿದೆ. ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಬೆಂಕಿ ಕಂಡ ತಕ್ಷಣ ಚಾಲಕ ಕೆಳಗೆ ಇಳಿದ ಪರಿಣಾಮ ಭಾರೀ ಅನಾಹುತ ಸಂಭವಿಸಿದೆ.
ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.