ಧಾರವಾಡ:– ಯೂರಿಯಾ ಗೊಬ್ಬರ ಸಾಗಿಸುತ್ತಿದ್ದ ಲಾರಿ ಪಲ್ಟಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಅಣ್ಣೀರಿಗೆ ಪಟ್ಟಣದ ಹೊರ ಹೊರಲಯದಲ್ಲಿ ಜರುಗಿದೆ.
Advertisement
ವಿಷ್ಣು ಭೋವಿ (30) ಮೃತ ಚಾಲಕ. ಹುಬ್ಬಳ್ಳಿಯಿಂದ ಹೈದ್ರಾಬಾದ್ ಗೆ ಯೂರಿಯಾ ಗೊಬ್ಬರ ಸಾಗಿಸುತ್ತಿದ್ದ ವೇಳೆ ಲಾರಿ ಪಲ್ಟಿ ಹೊಡೆದಿದೆ. ಮೇಲ್ನೋಟಕ್ಕೆ ಚಾಲಕನ ಅಜಾಗರೂಕ ಚಾಲನೆಯಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಅಣ್ಣಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.