ಗದಗ: ಬೆಟಗೇರಿಯ ಹುಯಿಲಗೋಳ ಕ್ರಾಸ್ ಬಳಿ ಬೆಳ್ಳಂಬೆಳಿಗ್ಗೆ ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಚಾಲಕ ಗಾಯಗೊಂಡಿದ್ದು, ವಿದ್ಯುತ್ ಕಡಿತಗೊಂಡಿದೆ.
Advertisement
ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಕಿತ್ತು ಬಂದಿದ್ದು, ಆದರೆ ಯಾವುದೇ ಅನಾಹುತ ಆಗಿಲ್ಲ.
ಚಾಲಕ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಬೆಟಗೇರಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬೆಟಗೇರಿ ಪೊಲೀಸ್ ಠಾಣೆಯ ಕೂಗಳತೆಯಲ್ಲಿ ಈ ಘಟನೆ ಜರುಗಿದೆ. ಬೆಟಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.