ಹಾಸನ: ಬೈಕ್ʼಗೆ ಲಾರಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ, ಸಕಲೇಶಪುರ ಪಟ್ಟಣದ, ಹೊಸ ಬಸ್ ನಿಲ್ದಾಣ ಸಮೀಪ ನಡೆದಿದೆ. ಆಕಾಶ್ (22), ಶಂಕರ (45) ಮೃತ ದುರ್ಧೈವಿಗಳಾಗಿದ್ದು,
ಸಕಲೇಶಪುರದಿಂದ ವಳಲಹಳ್ಳಿ ಗ್ರಾಮಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಬೈಕ್ ಗೆ ಲಾರಿ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಕಲೇಶಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



