ಟ್ರಾಕ್ಟರ್ ಗೆ ಲಾರಿ ಡಿಕ್ಕಿ: ಮೂವರಿಗೆ ಗಂಭೀರ ಗಾಯ!

0
Spread the love

ದೊಡ್ಡಬಳ್ಳಾಪುರ:- ಟ್ರಾಕ್ಟರ್ ಗೆ ಲಾರಿ ಡಿಕ್ಕಿ ಹೊಡೆದು ಮೂವರಿಗೆ ಗಂಭೀರ ಗಾಯವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ನಾರನಹಳ್ಳಿ ಗೇಟ್ ಬಳಿ ಜರುಗಿದೆ.

Advertisement

ದೊಡ್ಡಬಳ್ಳಾಪುರ ಮಾರ್ಗವಾಗಿ ಶಿವಮೊಗ್ಗಕ್ಕೆ ಟ್ರ್ಯಾಕ್ಟರ್ ತೆರಳುತ್ತಿತ್ತು. ಈ ವೇಳೆ ಹಿಂಬದಿಯಿಂದ ಡಿಕ್ಕಿ ಹೊಡೆದ ಲಾರಿಯು, ಮೂರ್ನಾಲ್ಕು ಮೀಟರ್ ಗುದ್ದಿಕೊಂಡು ಸಾಗಿದೆ. ಪರಿಣಾಮ ಮೂವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ದೊಡ್ಡಬಳ್ಳಾಪುರ ಸರಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ದೊಡ್ಡಬೆಳವಂಗಲ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.


Spread the love

LEAVE A REPLY

Please enter your comment!
Please enter your name here