Home Gadag News ಸಾರಿಗೆ ಬಸ್‌ ಗೆ ಲಾರಿ ಡಿಕ್ಕಿ: 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಸಾರಿಗೆ ಬಸ್‌ ಗೆ ಲಾರಿ ಡಿಕ್ಕಿ: 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

0
ಸಾರಿಗೆ ಬಸ್‌ ಗೆ ಲಾರಿ ಡಿಕ್ಕಿ: 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
Spread the love

ಲಕ್ಷ್ಮೇಶ್ವರ: ಲಕ್ಷ್ಮೇಶ್ವರ ಹೊರವಲಯದ ಹುಬ್ಬಳ್ಳಿ ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ ಸಾರಿಗೆ ಬಸ್-ಲಾರಿ ನಡುವೆ ಡಿಕ್ಕಿ ಸಂಭವಿಸಿ ಅದೃಷ್ಟವಶಾತ್ ಅನಾಹುತ ತಪ್ಪಿದೆ. ಲಕ್ಷ್ಮೇಶ್ವರ ಬಸ್ ನಿಲ್ದಾಣದಿಂದ ಹುಬ್ಬಳ್ಳಿ ಮಾರ್ಗವಾಗಿ ಪೂನಾದತ್ತ ಹೊರಟಿದ್ದ ಹೊಸ ಸಾರಿಗೆ ಬಸ್ಸಿಗೆ ಹುಬ್ಬಳ್ಳಿ ಕಡೆಯಿಂದ ವೇಗವಾಗಿ ಬಂದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಸಂಭವಿಸಿದ್ದು, ಬಸ್ಸಿನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ಚಿಕ್ಕಪುಟ್ಟ ಗಾಯಗಳೊಂದಿಗೆ ಬಚಾವಾಗಿದ್ದಾರೆ. ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕಾಗಮಿಸಿದ ಡಿಪೋ ಮ್ಯಾನೇಜರ್ ಸವಿತಾ ಆದಿ ಮತ್ತು ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here