ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬೂದಿಹಾಳ್ ಗೇಟ್ ಬಳಿ ಕಬ್ಬಿಣದ ಪೈಪ್ ತುಂಬಿದ ಬೃಹತ್ ಲಾರಿ ಪಲ್ಟಿ ಹೊಡೆದಿರುವ ಘಟನೆ ಜರುಗಿದೆ. ಘಟನೆ ಪರಿಣಾಮ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಉಂಟಾಗಿದೆ.
ಲಾರಿ ತುಮಕೂರು ಮಾರ್ಗವಾಗಿ ಬೆಂಗಳೂರು ಕಡೆ ಬರುತ್ತಿತ್ತು. ಚಾಲಕನ ಅತಿಯಾದ ವೇಗ ಹಾಗೂ ನಿರ್ಲಕ್ಷ್ಯದಿಂದ ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನೆ ಪರಿಣಾಮ ರಸ್ತೆಯಲ್ಲಿ ಪೈಪ್‌ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಇಂದು ನಸುಕಿನ ಜಾವ 3 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ನೆಲಮಂಗಲ ಸಂಚಾರಿ ಪೊಲೀಸರು ತೆರವು ಕಾರ್ಯದಲ್ಲಿ ಮಾಡಿದ್ದಾರೆ.



