ಮರಳು ತುಂಬಿದ್ದ ಲಾರಿ ಪಲ್ಟಿ: ಮಗು, ಮೂವರು ಮಹಿಳೆಯರು ಸಾವು!

0
Spread the love

ಗಾಂಧಿನಗರ:- ಗುಜರಾತ್‌ನ ಬನಸ್ಕಂತ ಜಿಲ್ಲೆಯ ಥರಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಮರಳು ತುಂಬಿದ್ದ ಲಾರಿ ಪಲ್ಟಿಯಾದ ಪರಿಣಾಮ ರಸ್ತೆಬದಿ ಕೆಲಸ ಮಾಡುತ್ತಿದ್ದ ಮೂವರು ಮಹಿಳೆಯರು ಹಾಗೂ ಒಂದು ಮಗು ದಾರುಣವಾಗಿ ಸಾವನ್ನಪ್ಪಿದ ಘಟನೆ ಜರುಗಿದೆ.

Advertisement

ರಸ್ತೆ ನಿರ್ಮಾಣ ಕಾರ್ಯ ನಡೆಯುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಕಿರಿದಾದ ತಿರುವಿನಲ್ಲಿ ಲಾರಿ ಚಾಲಕ ವಾಹನ ಚಲಾಯಿಸಲು ಪ್ರಯತ್ನಿಸಿದ ವೇಳೆ ಲಾರಿ ಪಲ್ಟಿಯಾಗಿದೆ .

ಘಟನೆಯ ನಂತರ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಯಿತು. ಜೆಸಿಬಿ ಬಳಸಿ ಮೃತರ ಶವಗಳನ್ನು ಹೊರತೆಗೆಯಲಾಗಿದೆ. ಮೃತರು ದಾಹೋದ್ ಜಿಲ್ಲೆಯವರಾಗಿದ್ದು, ಕೆಲಸಕ್ಕಾಗಿ ಬಂದಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here