ಬೆಂಗಳೂರು ಗ್ರಾಮಾಂತರ:- ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಸಮೀಪ ಟೊಮೆಟೊ ತುಂಬಿಕೊಂಡು ತೆರಳುತ್ತಿದ್ದ ಲಾರಿ ಪಲ್ಟಿ ಹೊಡೆದಿರುವ ಘಟನೆ ಜರುಗಿದೆ.
Advertisement
ಘಟನೆಯಲ್ಲಿ ಲಕ್ಷಾಂತರ ಮೌಲ್ಯದ ಟೊಮೆಟೊ ಸಂಪೂರ್ಣ ನಾಶವಾಗಿದೆ. ಮತ್ತೊಂದು ವಾಹನಕ್ಕೆ ಸೈಡ್ ಕೊಡಲು ಹೋಗಿ ಟೊಮೆಟೊ ಲಾರಿ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಕೋಲಾರದ ಟೊಮೆಟೊ ಮಾರ್ಕೆಟ್ ನಿಂದ 24 ಟನ್ ಟೊಮೆಟೊ ತುಂಬಿಕೊಂಡು ಗುಜರಾತ್ ಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಘಟನೆಯಲ್ಲಿ ಸುಮಾರು 15 ಲಕ್ಷ ಮೌಲ್ಯದ ಟೊಮೆಟೊ ಸಂಪೂರ್ಣ ನಜ್ಜು ಗುಜ್ಜಾಗಿ ನಾಶವಾಗಿದೆ. ಲಾರಿ ಪಲ್ಟಿಹೊಡೆದ ಪರಿಣಾಮ ಲಾರಿ ಚಾಲಕ ಹಾಗೂ ಕ್ಲಿನರ್ ಗೆ ಗಾಯವಾಗಿದ್ದು, ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.