ಚಿಕ್ಕಬಳ್ಳಾಪುರ: ಟೈರ್ ಬ್ಲಾಸ್ಟ್ ಆದ ಪರಿಣಾಮ ನಿಯಂತ್ರಣ ತಪ್ಪಿದ ಲಾರಿಯೊಂದು ಹೆದ್ದಾರಿಯಲ್ಲಿ ಸರಣಿ ಅಪಘಾತಕ್ಕೆ ಕಾರಣವಾದ ಘಟನೆ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪ ನಡೆದಿದೆ. ಅಪಘಾತದ ದೃಶ್ಯ ಅಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಎಸ್‌ಟಿಆರ್ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಲಾರಿ ಏಕಾಏಕಿ ನಿಯಂತ್ರಣ ತಪ್ಪಿ ಮೊದಲು ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಟ್ರ್ಯಾಕ್ಟರ್‌ನಲ್ಲಿದ್ದ ಇಟ್ಟಿಗೆಗಳು ರಸ್ತೆಯ ಮೇಲೆ ಚೆಲ್ಲಾಪಿಲ್ಲಿಯಾಗಿವೆ.
ಬಳಿಕ ಲಾರಿ ರಸ್ತೆ ವಿಭಜಕ ದಾಟಿ ವಿರುದ್ಧ ದಿಕ್ಕಿಗೆ ನುಗ್ಗಿ ಬೊಲೆರೋ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಪಿಕಪ್ ವಾಹನ ರಸ್ತೆಯಿಂದ ಹೊರಕ್ಕೆ ಎಸೆಯಲ್ಪಟ್ಟು ಜಮೀನಿನಲ್ಲಿ ಬಿದ್ದಿದೆ. ವಾಹನದಲ್ಲಿದ್ದ ಕ್ರೇಟ್‌ಗಳೂ ಚದುರಿಹೋಗಿವೆ.
ಅಪಘಾತದಲ್ಲಿ ಚಾಲಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.



