ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಷೇರು ಮಾರುಕಟ್ಟೆಯಲ್ಲಿ ಹಣ ಕಳೆದುಕೊಂಡ ಹಿನ್ನೆಲೆಯಲ್ಲಿ ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.
ಮೃತರನ್ನು ಹರ್ಷವರ್ಧನ್ (22) ಎಂದು ಗುರುತಿಸಲಾಗಿದೆ. ಇವರು ಮೊಬೈಲ್ ಮೂಲಕ ಸ್ಟಾಕ್ ಎಕ್ಸ್‌ಚೇಂಜ್ನಲ್ಲಿ ಟ್ರೇಡಿಂಗ್ ಮಾಡುತ್ತಿದ್ದರು. ಹೂಡಿಕೆ ಮಾಡಿದ ಹಣದಲ್ಲಿ ಲಕ್ಷಾಂತರ ರೂಪಾಯಿ ನಷ್ಟವಾಗಿದ್ದರಿಂದ ಮನೋವ್ಯಥೆಗೆ ಒಳಗಾಗಿದ್ದರು.
ಈ ಹಿನ್ನೆಲೆಯಲ್ಲಿ ಮನೆಯಲ್ಲೇ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂಬಂಧ ಹರ್ಷವರ್ಧನ್ ಅವರ ತಂದೆ ಚಂದ್ರಶೇಖರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.



