“ಗ್ಯಾರಂಟಿ ಹೆಸರಲ್ಲಿ ಕೋಟಿ-ಕೋಟಿ ಲೂಟಿ”: ಸಾಕ್ಷಿ ಕೇಳಿದ ಸಿದ್ದರಾಮಯ್ಯಗೆ HDK ತಿರುಗೇಟು!

0
Spread the love

ಬೆಂಗಳೂರು:- ಸಿಎಂ ಮತ್ತು ಮಾಜಿ ಸಿಎಂಗಳ ಆರೋಪ ಪ್ರತ್ಯಾರೋಪ ಮುಂದುವರಿದಿದೆ. ಮೊದಲಿಗೆ ರಾಜ್ಯ ಸರ್ಕಾರದ ವಿರುದ್ಧ 60 ಪರ್ಸೆಂಟ್ ಕಮಿಷನ್ ಆರೋಪವನ್ನು ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ HD ಕುಮಾರಸ್ವಾಮಿ ಮಾಡಿದರು. ಇದಕ್ಕೆ ಸಿದ್ದರಾಮಯ್ಯ ದಾಖಲೆ ಕೊಟ್ಟು ಮಾತನಾಡಲಿ ಎಂದಿದ್ದರು.

Advertisement

ಇದಕ್ಕೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಟಕ್ಕರ್ ಕೊಟ್ಟಿರುವ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ನಿಮ್ಮ ಸರಕಾರ ಗುತ್ತಿಗೆದಾರರನ್ನು ಎಷ್ಟು ನಿರ್ಲಜ್ಜವಾಗಿ ಸುಲಿಗೆ ಮಾಡುತ್ತಿದೆ ಎನ್ನುವುದಕ್ಕೆ ಈ ಸಾಕ್ಷಿಗುಡ್ಡೆ ಸಾಕ್ಷ್ಯ ಸಾಲದೇ ಮುಖ್ಯಮಂತ್ರಿಗಳೇ? ಚೆಂಬು ಹಾಕಿ ಹಂಡೆ ಹೊಡೆದರು ಎನ್ನುವಂತೆ ಗ್ಯಾರಂಟಿ ಹೆಸರಿನಲ್ಲಿ ಬಿಡಿಗಾಸು ಕೊಟ್ಟು ಕೋಟಿ ಕೋಟಿ ಲೂಟಿ ಮಾಡುತ್ತಿದ್ದೀರಿ” ಎಂದು ತಿರುಗೇಟು ನೀಡಿದ್ದಾರೆ.

ಗುತ್ತಿಗೆದಾರರ 32,000 ಕೋಟಿಯಷ್ಟು ಬಿಲ್ ಬಾಕಿ ಬಿದ್ದಿದೆ. ಈ ಬಾಕಿ ಮೇಲೆ ನಿಮ್ಮ ಪರ್ಸಂಟೇಜ್ ಕರಿನೆರಳು ಕೂಡ ಬಿದ್ದಿದೆ! ಸಾಲಸೋಲ ಮಾಡಿ ಕಾಮಗಾರಿ ಮಾಡಿರುವ ಗುತ್ತಿಗೆದಾರರು ದಯಾಮರಣಕ್ಕೆ ಅರ್ಜಿ ಬರೆಯುತ್ತಿದ್ದಾರೆ” ಎಂದು ವಾಗ್ದಾಳಿ ಮಾಡಿದರು.

ಗುತ್ತಿಗೆದಾರರ ಬಿಲ್ ಬಾಕಿ ಪಟ್ಟಿ ನೋಡಿ
ಜಲ ಸಂಪನ್ಮೂಲ: ₹14,600 ಕೋಟಿ
ಲೋಕೋಪಯೋಗಿ: ₹10,000 ಕೋಟಿ
ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್: ₹3,100 ಕೋಟಿ
ಸಣ್ಣ ನೀರಾವರಿ: ₹2,800 ಕೋಟಿ
ಇತರೆ ಇಲಾಖೆ: ₹1,500 ಕೋಟಿ
ಒಟ್ಟು: ₹32,000 ಕೋಟಿ!!

ಭಂಡತನ ಏಕೆ? ಆಗಿರುವ ತಪ್ಪು ಸರಿಪಡಿಸಿಕೊಳ್ಳಿ. ವಿನಾಕಾರಣ ಸಮರ್ಥನೆ ಲಾಯಕ್ಕಲ್ಲ. ಗುತ್ತಿಗೆದಾರರ ಬದುಕು ಉಳಿಸಿ ರಾಜ್ಯದ ಅಭಿವೃದ್ಧಿ ಕಡೆಗೆ ಗಮನ ಹರಿಸಿ. ಇದ್ದಿದ್ದನ್ನು ಇದ್ದಹಾಗೆ ಹೇಳಿದ್ದೇನೆ. ನೀವೂ, ನಿಮ್ಮ ಸಂಪುಟ ನನ್ನ ಮೇಲೆ ವಾಗ್ಯುದ್ಧಕ್ಕಿಳಿದರೆ ಉಪಯೋಗವೇನು? ಗುತ್ತಿಗೆದಾರರ ಬಾಕಿ ಪಾವತಿಗಿಂತ ನನ್ನನ್ನು ಟಾರ್ಗೆಟ್ ಮಾಡುವುದು ಮುಖ್ಯವಲ್ಲ” ಎಂದು ಉತ್ತರ ಕೊಟ್ಟಿದ್ದಾರೆ


Spread the love

LEAVE A REPLY

Please enter your comment!
Please enter your name here