ಲವ್ ಬ್ರೇಕಪ್: ಮದುವೆಗೆ ನಿರಾಕರಿಸಿದ ಪ್ರೇಯಸಿಗೆ ಚಾಕು ಇರಿದ ಪಾಗಲ್ ಪ್ರೇಮಿ!

0
Spread the love

ಹಾಸನ:- ಹಾಸನದ ಆಲೂರು ಪಟ್ಟಣದಲ್ಲಿ ಯುವಕನೋರ್ವ ತನ್ನ ಪ್ರೇಯಸಿಗೆ ಚಾರು ಇರಿದ ಘಟನೆ ಜರುಗಿದೆ.

Advertisement

ಮದುವೆಗೆ ನಿರಾಕರಿಸಿದ ಹಿನ್ನೆಲೆ ಕುಡಿದ ಮತ್ತಲ್ಲಿ ಚಾಕು ಇರಿದಿದ್ದಾನೆ. ಮೋಹಿತ್ ಹಾಗೂ ಅದೇ ಗ್ರಾಮದ ಯುವತಿ ಪರಸ್ಪರ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಕೆಲವು ದಿನಗಳಿಂದ ಮೋಹಿತ್‍ನಿಂದ ಯುವತಿ ದೂರವಾಗಿದ್ದಳು. ಆದರೂ ಪ್ರೇಯಸಿಯನ್ನು ಮದುವೆಯಾಗುವಂತೆ ಯುವಕ ಕಾಡುತ್ತಿದ್ದ ಎಂದು ತಿಳಿದು ಬಂದಿದೆ.

ಯುವಕನ ಕಾಟದಿಂದ ಬೇಸತ್ತಿದ್ದ ಯುವತಿ, ಈ ಬಗ್ಗೆ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಳು. ಬಳಿಕ ಎರಡೂ ಕುಟುಂಬದಿಂದ ರಾಜಿ ಸಂಧಾನಕ್ಕೆ ಮುಂದಾಗಿದ್ದರು. ಈ ಸಂಬಂಧ ಎರಡು ಕುಟುಂಬಗಳು ಯಾರ ತಂಟೆಗೂ ಯಾರು ಬರದಂತೆ ಮಾತುಕತೆ ನಡೆಸಿದ್ದರು.

ಬಳಿಕ ಗ್ರಾಮಸ್ಥರ ಜೊತೆಗೆ ಬಂದು ನೋಟರಿ ಮಾಡಿಸಲು ಎರಡು ಕುಟುಂಬಸ್ಥರು ಬಂದಿದ್ದರು. ಈ ವೇಳೆ ಪಾನಮತ್ತನಾಗಿ ಬಂದಿದ್ದ ಯುವಕ ಏಕಾಏಕಿ ಯುವತಿಯ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ್ದಾನೆ. ಹಲ್ಲೆಯ ಬಳಿಕ ಆರೋಪಿ ಪರಾರಿಯಾಗಿದ್ದಾನೆ.

ದಾಳಿಯಿಂದ ಯುವತಿಯ ತಲೆ ಹಾಗೂ ಕೈಗಳಿಗೆ ತೀವ್ರ ಗಾಯಗಳಾಗಿವೆ. ಗಾಯಳುವಿಗೆ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.


Spread the love

LEAVE A REPLY

Please enter your comment!
Please enter your name here