ಮೈಸೂರು:- ಮೈಸೂರು ತಾಲೂಕಿನ ಹಡಜನ ಗ್ರಾಮದಲ್ಲಿ ಪ್ರೀತಿ ವೈಫಲ್ಯದಿಂದಾಗಿ ಮನನೊಂದ ಯುವಕನೊರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ.
ಮಧುಸೂಧನ್ ಆತ್ಮಹತ್ಯೆ ಮಾಡಿಕೊಂಡವರು. ಪ್ರೀತಿ ವೈಫಲ್ಯ ಹಿನ್ನೆಲೆಯಲ್ಲಿ ಮಧುಸೂಧನ್ ಮೊನ್ನೆ ವಿಡಿಯೊ ಮಾಡಿ ವಿಷ ಕುಡಿದಿದ್ದ.
ವಿಷಯ ಗೊತ್ತಾಗಿ ಪೋಷಕರು ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಶುಕ್ರವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



