ದಾವಣಗರೆ: ಹುಬ್ಬಳ್ಳಿಯಲ್ಲಿ ಜಿಮ್ ಟ್ರೈನರ್ ವಿರುದ್ದ ಕೇಳಿಬಂದಿರುವ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಜಿಮ್ ಟ್ರೇನರ್ ಸಮೀರ್ ವಿರುದ್ಧ ಕೇಳಿ ಬಂದಿರುವ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ. ಪ್ರಕರಣದ ಬಗ್ಗೆ ಎಲ್ಲಾ ಮಾಹಿತಿಯನ್ನು ನೀಡಲು ಅಧಿಕಾರಿಗಳಿಗೆ ತಿಳಿಸಿದ್ದೇನೆ. ಯಾರೇ ಆಗಿದ್ದರೂ ಕೂಡ ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುತ್ತೇವೆ.
ಈಗಾಗಲೇ ಯುವತಿಯನ್ನು ರಕ್ಷಣೆ ಮಾಡಲಾಗಿದೆ. ಜಿಮ್ ಟ್ರೈನರ್ ಮೇಲೆ ಕ್ರಮ ತೆಗೆದುಕೊಳ್ಳಲು ಹೇಳಿದ್ದೇನೆ. ಇಂತಹ ಕೇಸ್ಗಳಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.



